Advertisement
ಜಮ್ಮು – ಕಾಶ್ಮೀರದ ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆಯ ಅನಂತರ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.
Related Articles
Advertisement
ಬಳಿಕ ಭದ್ರತ ಪಡೆಗಳನ್ನು ಉದ್ದೇಶಿಸಿ ಮಾತನಾಡಿದ ಶಾ, ತ್ವರಿತಗತಿಯಲ್ಲಿ ಉಗ್ರರನ್ನು ಸದೆಬಡಿಯುವಂತೆ, ಜನರಲ್ಲಿ ಹೆಚ್ಚುತ್ತಿರುವ ಧರ್ಮಾಂಧತೆಯನ್ನು ನಿಯಂತ್ರಿಸುವಂತೆ, ಕಣಿವೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಬೇಕು, ನಾಗರಿಕರ ಹತ್ಯೆಗಳನ್ನು ತಡೆಯಬೇಕು ಎಂದು ಸೂಚಿಸಿದರು.
ಸ್ಥಳೀಯರೊಂದಿಗೆ ಸಂವಾದ ನಡೆಸಿದ ಅಮಿತ್ ಶಾ ವಿಶೇಷ ಸ್ಥಾನಮಾನ ರದ್ದು ಮಾಡಿದ್ದನ್ನು ಪ್ರಸ್ತಾವಿಸಿದರು. ಜಮ್ಮು – ಕಾಶ್ಮೀರಕ್ಕೆ ಇದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ಇದು ಭಯೋತ್ಪಾದನೆ, ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ತೊಲಗಿಸಿದೆ. ಇಲ್ಲಿನ ಯುವಕರು ರಾಜ್ಯದ ಅಭಿವೃದ್ಧಿಯಲ್ಲಿ ಕೈಜೋಡಿಸ ಬೇಕು ಎಂದು ಕರೆ ನೀಡಿದರು. ಜೂ. 22ರಂದು ಉಗ್ರರ ಗುಂಡಿಗೆ ಬಲಿಯಾದ ಪೊಲೀಸ್ ಅಧಿಕಾರಿ ಪರ್ವೇಜ್ ಅಹ್ಮದ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.