Advertisement
ಭಾನುವಾರ ಬೆಳಗ್ಗೆ ಆಗಮಿಸುತ್ತಿರುವ ಅಮಿತ್ ಶಾ ಅವರು ದಿನವಿಡೀ ಸಭೆ ನಡೆಸಿ ಪಕ್ಷದ ರಾಜ್ಯ ನಾಯಕರಿಗೆ ಹಲವು ನಿರ್ದೇಶನಗಳನ್ನು ನೀಡಲಿದ್ದಾರೆ. ಈ ಸಂದರ್ಭದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಮತ್ತು ಮಹದಾಯಿ ವಿವಾದಗಳಲ್ಲಿ ಇತರೆ ಪಕ್ಷಗಳನ್ನು ಯಾವ ರೀತಿ ಎದುರಿಸಬೇಕು ಎಂಬ ಬಗ್ಗೆ ತಂತ್ರಗಾರಿಕೆಗಳನ್ನು ಸಿದ್ಧಪಡಿಸುವ ಸಾಧ್ಯತೆ ಇದೆ.
Related Articles
Advertisement
ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಸಹ ಉಸ್ತುವಾರಿ ಪುರಂದೇಶ್ವರಿ, ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಚುನಾವಣಾ ಸಹ ಉಸ್ತುವಾರಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಸಭೆಯಲ್ಲಿರುತ್ತಾರೆ.
ಎಚ್ಚರಿಕೆಯ ಹೆಜ್ಜೆಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿಗಳನ್ನು ಮನವೊಲಿಸುವಲ್ಲಿ ರಾಜ್ಯ ಬಿಜೆಪಿ ಯಶಸ್ವಿಯಾಗುವ ಮೂಲಕ ಇತಿಹಾಸದಲ್ಲೇ ಉತ್ತಮ ಸಾಧನೆ ಮಾಡಿದೆಯಾದರೂ ಈ ಪ್ರಕರಣವನ್ನು ನಿಭಾಯಿಸಿದ ರೀತಿಯಿಂದ ಎಲ್ಲಾ ಬಣ್ಣವನ್ನು ಮಸಿ ನುಂಗಿತು ಎಂಬಂತಾಗಿ ರಾಜಕೀಯವಾಗಿ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಉತ್ಯುತ್ಸಾಹದ ಹೇಳಿಕೆ. ಈ ಬಗ್ಗೆ ಈಗಾಗಲೇ ಪಕ್ಷದಲ್ಲಿ ಸಾಕಷ್ಟು ಚರ್ಚೆಗಳಾಗದ್ದು, ಭಾನುವಾರ ಅಮಿತ್ ಶಾ ಅವರೊಂದಿಗೂ ಈ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ. ಮಹದಾಯಿಯಷ್ಟೇ ಬಿಜೆಪಿಯನ್ನು ಕಾಡುತ್ತಿರುವುದು ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ. ಇದುವರೆಗೆ ವಿವಾದದಲ್ಲಿ ಯಾವುದೇ ಬಹಿರಂಗ ಹೇಳಿಕೆ ನೀಡದೆ ಸಿದ್ದಗಂಗಾ ಶ್ರೀಗಳು ಮತ್ತು ಅಖೀಲ ಭಾರತ ವೀರಶೈವ ಮಹಾಸಭಾ ಕೈಗಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಎಚ್ಚರಿಕೆಯಿಂದಲೇ ಹೆಜ್ಜೆಗಳನ್ನು ಇಡುತ್ತಿದೆ. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಈ ಕುರಿತು ನಿರ್ಧಾರ ಕೈಗೊಳ್ಳುವ ಅನಿವಾರ್ಯ ಸ್ಥಿತಿ ಎದುರಾಗಲಿದೆ. ಇಲ್ಲದೇ ಇದ್ದರೆ, ಗುಜರಾತ್‌ನಲ್ಲಿ ಪಾಟೀದಾರ್ ಸಮುದಾಯಕ್ಕೆ ಮೀಸಲು ವಿವಾದದಿಂದ ಬಿಜೆಪಿ ತಂದುಕೊಂಡಿದ್ದ ಅಪಾಯವನ್ನು ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದದಲ್ಲಿ ತಂದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು. ಹೀಗಾಗಿ ಇದಕ್ಕೂ ಮ¨ªೆರೆಯುವ ಬಗ್ಗೆ ಭಾನುವಾರದ ಸಭೆಯಲ್ಲಿ ಚರ್ಚೆಯಾಗಲಿದೆ. ಹೆಚ್ಚುತ್ತಿದೆ ಆತಂಕ
ಈ ಮಧ್ಯೆ ಕಳೆದ ಆಗಸ್ಟ್ ತಿಂಗಳಲ್ಲಿ ತಾವು ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷದ ನಾಕರು, ಟಿಕೆಟ್ ಆಕಾಂಕ್ಷಿಗಳು, ಹಾಲಿ ಶಾಸಕರಿಗೆ ನೀಡಿದ್ದ ಟಾಸ್ಕ್ಗಳ ಬಗ್ಗೆಯೂ ಅಮಿತ್‌ಶಾ ಪರಿಶೀಲನೆ ನಡೆಸಲಿ¨ªಾರೆ. ಹೀಗಾಗಿ ಈ ಟಾಸ್ಕ್ಗಳನ್ನು ಸರಿಯಾಗಿ ನಿರ್ವಹಿಸದ ಮುಖಂಡರಲ್ಲಿ ಆಂತಕ ಕಾಣಿಸಿಕೊಂಡಿದೆ. ತಾವು ಕಳೆದ ಬಾರಿ ಬೆಂಗಳೂರಿಗೆ ಬಂದು ಹೋದ ಬಳಿಕ ರಾಜ್ಯಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿ ಮುಖಂಡರು ಚುರುಕಾಗಿ ಕೆಲಸ ಮಾಡುತ್ತಿರುವುದು ಶಾ ಅವರಲ್ಲಿ ಸ್ವಲ್ಪ$ ಮಟ್ಟಿನ ಸಮಾಧಾನ ತಂದಿದೆ. ಆದರೆ, ಆಂತರಿಕವಾಗಿ ಭಿನ್ನಮತ ಇನ್ನೂ ಸ್ವಲ್ಪ ಮಟ್ಟಿಗೆ ಉಳಿದಿರುವುದು ರಾಜ್ಯ ನಾಯಕರಲ್ಲಿ ಶಾ ಆಗಮನದ ಬಗ್ಗೆ ಇದ್ದ ಆಂತಕವನ್ನು ಹೆಚ್ಚಿಸಿದೆ. ಮಾಹಿತಿ ಸಂಗ್ರಹ:
ಶನಿವಾರ ಸಂಜೆ ಬಿಜೆಪಿ ಮುಖಂಡರ ಸಭೆ ನಡೆಸಿದ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಬಿಜೆಪಿ ಚುನಾವಣಾ ಸಿದ್ಧತೆ, ಪರಿವರ್ತನಾ ಯಾತ್ರೆ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಹಲವು ಮಾಹಿತಿಯನ್ನು ರಾಜ್ಯ ಮುಖಂಡರಿಂದ ಪಡೆದಿದ್ದಾರೆ. ಈ ಹಿಂದೆ ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ನೀಡಿದ್ದ ಟಾಸ್ಕ್ಗಳ ಅನುಷ್ಠಾನದ ಬಗ್ಗೆಯೂ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಶಾ ಏನೇನು ಮಾಡ್ತಾರೆ?
– ರಾಜ್ಯದಲ್ಲಿ ಬೂತ್ ಕಮಿಟಿಗಳ ರಚನೆ ಮತ್ತು ಬೂತ್ ಮಟ್ಟದಲ್ಲಿ ಸಂಘಟನೆ ಕುರಿತು ತಾವು ಈ ಹಿಂದೆ ನೀಡಿದ ಸೂಚನೆಗಳನ್ನು ಪಾಲಿಸಲಾಗಿದೆಯೇ ಎಂದು ಪರಿಶೀಲನೆ.
– ಉದ್ಘಾಟನೆೆ ವೇಳೆ ವೈಫಲ್ಯದ ಹಣೆಪಟ್ಟಿ ಅಂಟಿಸಿಕೊಂಡ ಪರಿವರ್ತನಾ ಯಾತ್ರೆ ನಂತರದಲ್ಲಿ ಸರಿಯಾಗಿ ನಡೆಯುತ್ತಿದೆಯೇ ಮುಖಂಡರು ಭಾಗವಹಿಸುತ್ತಿದ್ದಾರೆಯೇ ಎಂದು ತಿಳಿದುಕೊಳ್ಳುವುದು.
– ಲಿಂಗಾಯತ ಪ್ರತ್ಯೇಕ ಧರ್ಮ ಮತ್ತು ಮಹದಾಯಿ ವಿವಾದಗಳಲ್ಲಿ ಸಿಲುಕಿಕೊಂಡಿರುವ ಪಕ್ಷದ ಮೇಲೆ ಚುನಾವಣೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳಲು ಕಾರ್ಯತಂತ್ರ ಸಿದ್ಧಪಡಿಸುವುದು.
– ಚುನಾವಣೆ ಸಮೀಪಿಸುತ್ತಿರುವುದರಿಂದ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಹೇಗೆ ಸಂಘಟನೆ ಕೆಲಸ ನಡೆಯುತ್ತಿದೆ. ಅಭ್ಯರ್ಥಿ ಆಕಾಂಕ್ಷಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಗತ್ಯ ಮಾಹಿತಿ ಸಂಗ್ರಹಿಸುವುದು.