Advertisement

ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ

05:04 PM Jan 24, 2022 | Team Udayavani |

ಪಣಜಿ: ಬಿಜೆಪಿ ಗೋವಾ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಭಾರಿ ಕಸರತ್ತು ನಡೆಸಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಬಿಜೆಪಿ ರಾಷ್ಟ್ರೀಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 30 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.

Advertisement

ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಗೋವಾ ಭೇಟಿಯಿಂದ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಆಯೋಗ ಹೊರಡಿಸಿರುವ ಎಲ್ಲ ನಿಯಮಗಳಿಗೆ ಬದ್ಧವಾಗಿ ಜನವರಿ 28 ರಿಂದ ಪ್ರಧಾನಿ ಮೋದಿ,ಶಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಪಕ್ಷದ ಪರ  ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾನಾವಡೆ ಮಾಹಿತಿ ನೀಡಿದರು.

ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಸಹ ಉಸ್ತುವಾರಿ ಕಿಶನ್ ರೆಡ್ಡಿ, ರವರು ರಾಜ್ಯದಲ್ಲಿ ಪಕ್ಷದ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next