Advertisement

ಅಮಿತ್‌ ಶಾ ವಿಡಿಯೋ ಸಂವಾದ ಇಂದು

01:16 AM Feb 07, 2019 | |

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ತಯಾರಿ ಕಾರ್ಯ ಚುರುಕುಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಗುರುವಾರ ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಕಳೆದ ಜನವರಿ 11 ಹಾಗೂ 12ರಂದು ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಅಮಿತ್‌ ಶಾ ಅವರು ವಿಡಿಯೋ ಸಂವಾದಕ್ಕೆ ಮುಂದಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯ ಪದಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next