Advertisement
ಪಕ್ಷದ ರಾಜ್ಯ ಘಟಕದಿಂಆ. 18ರಿಂದ ಒಂದು ವಾರ ಕಾಲ ಸರ್ಕಾರದ ಭ್ರಷ್ಟಾಚಾರ, ಆದಾಯ ತೆರಿಗೆ ದಾಳಿಗೊಳಗಾಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದರೆ, ಮತ್ತೂಂದೆಡೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಆರ್‌ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಲ್ಲಿ ಶಾಮೀಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಯುವ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದೆ.
ನಿಷೇಧಕ್ಕೆ ಆಗ್ರಹ:
ರಾಜ್ಯದಲ್ಲಿ ಸಮಾಜ ವಿದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವ ಪಿಎಫ್ಐ ಮತ್ತು ಕೆಎಫ್ಡಿ ಸಂಘಟನೆಗಳನ್ನು ಕೂಡಲೇ
ಷೇಧಿಸಬೇಕು. ಈ ಸಂಘಟನೆ ಬ್ಯಾಂಕ್ ಖಾತೆ, ಸ್ಥಿರ ಮತ್ತುಚರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ರಾಜ್ಯದಲ್ಲಿ ಹಿಂದೂಗಳ ಮೇಲಾಗಿರುವ ಹತ್ಯೆ ಮತ್ತು ಹಲ್ಲೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕು. ಇಂತಹ ಸಮಾಜ ಘಾತುಕ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಸಚಿವ ರಮಾನಾಥ ರೈ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿರುವ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್ ಸಿಂಹ, ಅದಕ್ಕಾಗಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. 2011ರಲ್ಲಿ ಮೈಸೂರಿನಲ್ಲಿ ನಡೆದಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಹತ್ಯೆ, ಎರಡು ವರ್ಷದ ಹಿಂದೆ ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆ ಹಿಂದೆ ಈ ಸಂಘಟನೆಗಳ ಕೈವಾಡವಿತ್ತು. ಇತ್ತೀಚೆಗೆ ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್, ಮೂಡಬಿದರೆಯ ಪ್ರಶಾಂತ್ ಪೂಜಾರಿ ಮತ್ತು ಶರತ್ ಮಡಿವಾಳ ಹತ್ಯೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವವರು ಕೂಡ ಇದೇ
ಸಂಘಟನೆಗಳಿಗೆ ಸೇರಿದವರು. ಆದ್ದರಿಂದ ಕೂಡಲೇ ಈ ಸಂಘಟನೆಗಳ ವಿರುದಟಛಿ ಕ್ರಮ ಕೈಗೊಂಡು ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Related Articles
ಬೆಂಗಳೂರು: ಆದಾಯ ತೆರಿಗೆ ಇಲಾಖೆಯಿಂದ ದಾಳಿಗೊಳಗಾಗಿರುವ ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶುಕ್ರವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ಐಟಿ ದಾಳಿಗೊಳಗಾದ ಇಬ್ಬರು ಸಚಿವರು ತಕ್ಷಣ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಆ.18ರಂದು ಬೆಳಗ್ಗೆ 10.30ಕ್ಕೆ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಸೇರಿ ಅಲ್ಲಿಂದ ಮೆರವಣಿಗೆ ಹಮ್ಮಿಕೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ತಿಳಿಸಿದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಜೊತೆಗೆ ಮುಂದಿನ ಒಂದು ವಾರ ಕಾಲ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಹಲವು ರೀತಿಯ ಹೋರಾಟಗಳನ್ನು ನಡೆಸಲಾಗುವುದು. ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವರ ರಾಜಿನಾಮೆಯನ್ನು ಮುಖ್ಯಮಂತ್ರಿಗಳು ಪಡೆಯುವವರೆಗೆ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು. ಇದರ ಜತೆಗೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಸಿದ ಇನ್ನಷ್ಟು ಸಚಿವರ ಹೆಸರು ಬಹಿರಂಗಪಡಿಸಲಾಗುವುದು ಎಂದು ಹೇಳಿದರು.
Advertisement