Advertisement

ಅಮಿತ್‌ ಶಾ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಬೊಮ್ಮಾಯಿ

10:29 PM Apr 09, 2022 | Team Udayavani |

ಬೀದರ್‌: ಕರ್ನಾಟಕದಲ್ಲಿ ಎಂದಿಗೂ ಹಿಂದಿ ಹೇರಿಕೆ ಆಗುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಡ್ಡಾಯವಾಗಿ ಹಿಂದಿ ಹೇರುವಂತೆಯೂ ಹೇಳಿಲ್ಲ. ಆದರೆ ಅವರ ಮಾತನ್ನು ಅನಗತ್ಯವಾಗಿ ಕೆಲವರು ತಪ್ಪಾಗಿ ಅರ್ಥೈಸಿ ಜನರ ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಹಿಂದಿ ಹೇರಿಕೆ ಗುಲಾಮಗಿರಿತನದ ಹೆಗ್ಗುರುತು ಎಂದಿರುವ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಸವಕಲ್ಯಾಣದಲ್ಲಿ ಶನಿವಾರ ಪ್ರತಿಕ್ರಿಯಿಸಿದ ಸಿಎಂ, ನಮಗೆ ಅರ್ಚಕರ ಬಗ್ಗೆ ಅಪಾರ ಗೌರವವಿದ್ದು, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು, ಅರ್ಚಕರ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದರು.

ಇದನ್ನೂ ಓದಿ:ನಾನಂತೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ನಿಲ್ಲುವುದು ಖಚಿತ: ಹೊರಟ್ಟಿ

ಸರಕಾರಕ್ಕೆ ಸಂಬಂಧವಿಲ್ಲ
ರಾಜ್ಯದಲ್ಲಿ ವಕ್ಫ್  ಬೋರ್ಡ್‌ ಬ್ಯಾನ್‌ ಅಭಿಯಾನ ಕುರಿತು ಶ್ರೀರಾಮ ಸೇನೆಯ ಪ್ರಮೋದ್‌ ಮುತಾಲಿಕ ಅವರ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅಭಿಯಾನ ಮತ್ತು ಮತ್ತು ಸರಕಾರಕ್ಕೆ ಯಾವುದೇ ಸಂಬಂಧವಿಲ್ಲ. ಕಾನೂನಿನಂತೆ ನಡೆದುಕೊಂಡು, ಶಾಂತಿ-ಸುವ್ಯವಸ್ಥೆ ಕಾಪಾಡುವುದು ನಮ್ಮ ಕೆಲಸ. ಸರ್ವ ಧರ್ಮ ಸಮನ್ವಯತೆ ಕಾಪಾಡುವುದು ಸರಕಾರದ ಧ್ಯೇಯ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next