Advertisement

ಬೂತ್‌ ಪ್ರಮುಖರೊಂದಿಗೆ ಅಮಿತ್‌ ಶಾ ಚಿಂತನ-ಮಂಥನ

09:40 AM Aug 29, 2017 | |

ಬೆಂಗಳೂರು: ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬೂತ್‌ ಮಟ್ಟದಿಂದ ಸಂಘಟನೆ ಮಾಡಬೇಕು. ಮೊದಲು ತಳಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ರಾಜ್ಯ ನಾಯಕರಿಗೆ ಹೇಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ತಾವೇ ನೇರವಾಗಿ ಬೂತ್‌ ಮಟ್ಟದ ಪ್ರಮುಖರೊಂದಿಗೆ ಚಿಂತನ-ಮಂಥನ ನಡೆಸಲು ತೀರ್ಮಾನಿಸಿದ್ದಾರೆ.

Advertisement

ಆ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಬೂತ್‌ ಮಟ್ಟದ ಪ್ರಮುಖರ ಸಮಾವೇಶ ಏರ್ಪಡಿಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಅವರು, ಪ್ರತಿ ಬೂತ್‌ ನಿಂದ 9 ಮಂದಿಯನ್ನು ಸಮಾವೇಶಕ್ಕೆ ಆಹ್ವಾನಿಸುವಂತೆ ತಿಳಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ತಾವೇ ಬಂದು ಬೂತ್‌ ಮಟ್ಟದ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌, ಚುನಾವಣಾ ಸಹ ಉಸ್ತುವಾರಿ ಪಿಯೂಷ್‌ ಗೋಯೆಲ್‌ ಚಿಂತನ-ಮಂಥನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಚಿಂತನ-ಮಂಥನಕ್ಕೆ ಪ್ರತಿ ಬೂತ್‌ನಿಂದ ಬೂತ್‌ ಕಮಿಟಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿದಂತೆ 9 ಮಂದಿಯನ್ನು ಆಹ್ವಾನಿಸಲಾಗುತ್ತದೆ. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು, ಇಬ್ಬರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರು ಮತ್ತು ಇಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು ಎಂದು ಶಾ ತಿಳಿಸಿದ್ದಾರೆ ಎನ್ನಲಾಗಿದೆ.

ಇಂದೂ ಮುಂದುವರಿಯಲಿದೆ ಸಭೆ:ಪಕ್ಷ ಸಂಘಟನೆ ಮತ್ತು ಸ್ಥಳೀಯ ಮಟ್ಟದಲ್ಲಿ ಭಿನ್ನಮತ ಶಮನಕ್ಕಾಗಿ ಜಿಲ್ಲಾ ಪ್ರಮುಖರೊಂದಿಗೆ ಬಿಜೆಪಿ ಕೋರ್‌ ಕಮಿಟಿ ಸದಸ್ಯರು ನಡೆಸುತ್ತಿರುವ ಸಭೆ ಮಂಗಳವಾರ ಮುಂದುವರಿಯಲಿದೆ. ಮಂಗಳವಾರ ಬೆಳಗ್ಗಿನಿಂದ ರಾತ್ರಿಯವರೆಗೆ ಮೈಸೂ ರು ನಗರ, ಮೈಸೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಗಳ ಪ್ರಮುಖರೊಂದಿಗೆ ಕೋರ್‌ ಕಮಿಟಿ ಸದಸ್ಯರು ಸಮಾಲೋಚನೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next