Advertisement

‘ಪ್ರಾಜೆಕ್ಟ್ ಕೆ’ ಶೂಟಿಂಗ್ ವೇಳೆ ಬಿದ್ದು ಗಾಯಗೊಂಡ ಅಮಿತಾಭ್ ಬಚ್ಚನ್; ಪಕ್ಕೆಲುಬು ಮುರಿತ

10:18 AM Mar 06, 2023 | Team Udayavani |

ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್ ಬಚ್ಚನ್ ಗಾಯಗೊಂಡಿದ್ದು, ಪಕ್ಕೆಲುಬು ಮುರಿದಿದೆ.

ಅಮಿತಾಭ್ ಬಚ್ಚನ್ ಅವರು ತಮ್ಮ ಆರೋಗ್ಯದ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. ಹೈದರಾಬಾದ್ ನಲ್ಲಿ ಚಿಕಿತ್ಸೆ ಪಡೆದಿದ್ದು, ಸದ್ಯ ಮುಂಬೈ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಬಡವರ ಶಾಪ ಎದುರಿಸಲಿದ್ದಾರೆ: ಅರವಿಂದ ಕೇಜ್ರಿವಾಲ್

ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಸಹಜತೆಗೆ ಮರಳು ಕೆಲವು ದಿನಗಳು ಬೇಕಾಗಬಹುದು. ಬಳಿಕ ಶೂಟಿಂಗ್ ಗೆ ಮರಳುತ್ತೇನೆ ಎಂದು ಬಿಗ್ ಬಿ ಹೇಳಿಕೊಂಡಿದ್ದಾರೆ.

Advertisement

ನಾಗ್ ಅಶ್ವಿನ್ ಅವರ ನಿರ್ದೇಶನದ ‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಪ್ರಮುಖ ಪಾತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಕಾಣಿಸಿಕೊಳ್ಳುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next