ಮುಂಬಯಿ: ಖ್ಯಾತ ನಟ ಅಮಿತಾಬ್ ಬಚ್ಚನ್ ಒಂದು ದಿನದ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು ಎಂಬ ಸುದ್ದಿ ಎಲ್ಲೆಡೆ ಹರಡಿತ್ತು ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಕೂಡ ಆತಂಕಗೊಂಡಿದ್ದರು ಆದರೆ ಶುಕ್ರವಾರ ಸಂಜೆಯೇ ಅಮಿತಾಬ್ ಬಚ್ಚನ್ ಆಸ್ಪತ್ರೆಯಿಂದ ಬಿಡುಗಡೆಗೊಂಡು ಥಾಣೆಯ ದಾದೋಜಿ ಕೊಂಡದೇವ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾಟ ವೀಕ್ಷಣೆ ಮಾಡಲು ತೆರಳಿದ್ದಾರೆ ಎಂಬ ಮಾಹಿತಿಯು ಲಭ್ಯವಾಗಿದೆ.
ಅಮಿತಾಭ್ ಬಚ್ಚನ್ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂಬ ವಿಚಾರ ಹಬ್ಬುತ್ತಿದ್ದಂತೆ ಅಮಿತಾಭ್ ಬಚ್ಚನ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಭಾವಿಸಿದ್ದರು ಆದರೆ ಆಸ್ಪತ್ರೆಯ ಮೂಲಗಳು ನೀಡಿದ ಮಾಹಿತಿ ಪ್ರಕಾರ ಬಿಗ್ ಬಿ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿಲ್ಲ ಬದಲಾಗಿ ಕಾಲಿನ ರಕ್ತನಾಳದಲ್ಲಿ ಉಂಟಾದ ಸಮಸ್ಯೆಗೆ ಸಂಬಂಧಿಸಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಈ ಕಾರಣಕ್ಕೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ ಚಿಕಿತ್ಸೆ ಪಡೆದ ಕೆಲವೇ ಗಂಟೆಗಳಲ್ಲಿ ಬಿಗ್ ಬಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಸ್ಪತ್ರೆಯಿಂದ ಬಿಡುಗಡೆಗೊಂಡ ಅವರು ಥಾಣೆಯ ದಾದೋಜಿ ಕೊಂಡದೇವ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್‌ನ ಅಂತಿಮ ಪಂದ್ಯ ವಿಕ್ಷಣೆಗೆ ತೆರಳಿದ್ದು ಇದಾದ ಬಳಿಕ ಪಂದ್ಯಾಟ ಮುಗಿಸಿ ಹಿಂತಿರುಗುವ ವೇಳೆ ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇದೆಲ್ಲಾ ಸುಳ್ಳು ಸುದ್ದಿ ಎಂದು ಹೇಳಿ ತೆರಳಿದ್ದಾರೆ.
ಈ ಇಳಿ ವಯಸ್ಸಿನಲ್ಲೂ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಮೇ 9ರಂದು ರಿಲೀಸ್ ಆಗಲಿರುವ ಕಲ್ಕಿ 2898 ಎಡಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: Lok Sabha Polls: ತಪ್ಪಿದ ಟಿಕೆಟ್… ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಿತೇಂದರ್ ರೆಡ್ಡಿ