Advertisement

17ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಳಗಾವಿಗೆ

03:31 PM Jan 08, 2021 | Team Udayavani |

ಗೋಕಾಕ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜ.17ರಂದು ಮಧ್ಯಾಹ್ನ 2 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು
ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಅವರು ಈ ಕುರಿತು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ಮೊನ್ನೆ ಜರುಗಿದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಬೃಹತ್‌ ಭಾಜಪ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ
ಮಾತನಾಡಲಿದ್ದಾರೆ. ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು.

Advertisement

ಸುಮಾರು 2ರಿಂದ 3 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಈ ಸಭೆಯಲ್ಲಿ ಎಲ್ಲ ಭಾಜಪ ಕಾರ್ಯಕರ್ತರು
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:“ಸ್ವಾಭಿಮಾನಿ ರೈತ”: ರೈತರಿಗೆ ಗುರುತಿನ‌ ಚೀಟಿ ನೀಡಲು ಮುಂದಾದ ಸರ್ಕಾರ

ಗೋಕಾಕ ಅಭಿವೃದ್ಧಿಗೆ 100 ಕೋಟಿ ಪ್ರಸ್ತಾವನೆ:
2019-20ನೇ ಸಾಲಿನ ವಿಶೇಷ ಘಟಕ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವ ಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ ರೂ.ಗಳ ಮಂಜೂರಾತಿ ಪಡೆದು ರೈತಾಪಿ ವರ್ಗದ ಅನುಕೂಲಕ್ಕಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್‌ ಪೇವರ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್‌-ಅಪ್‌ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಮಂಬರುವ ಆರ್ಥಿಕ ವರ್ಷದಲ್ಲಿ 100 ಕೋಟಿ ರೂ.ಗಳ ಅನುದಾನ ಮಂಜೂರಾತಿಗೆ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ರವಾನಿಸಲಾಗಿದ್ದು, ಇದೇ ಮಾರ್ಚ್‌ ಅಂತ್ಯದ ವೇಳೆಗೆ ಅನುದಾನ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next