Advertisement
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಖೇಲೋ ಇಂಡಿಯಾ 2021 ರ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎರಡನೇ ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಮೂರು ಸಾವಿರ ಕ್ರೀಡಾಪಟುಗಳು ಭಾಗಿಯಾಗಿದ್ದಾರೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಕಾರ್ಯಕ್ರಮಕ್ಕೆ ಇಷ್ಟು ಜನ ಕ್ರೀಡಾಪಟುಗಳು ಆಗಮಿಸಿರುವುದು ಸಂತಸದ ವಿಚಾರ ಅಲ್ಲದೆ ಒಲಿಂಪಿಕ್ ನಲ್ಲಿ ಭಾರತದ ಕ್ರೀಡಾಪಟುಗಳ ಕೊರತೆ ಇದೆ. ಕ್ರಿಕೆಟ್ ಒಂದನ್ನು ಬಿಟ್ಟು ಉಳಿದೆಲ್ಲಾ ಕ್ರೀಡೆಯಲ್ಲಿ ಕ್ರೀಡಾಪಟುಗಳ ಕೊರತೆ ಕಾಣುತ್ತಿತ್ತು ಆದರೆ ಇನ್ನು ಮುಂದೆ ಈ ರೀತಿ ಆಗಬಾರದು ಒಲಿಂಪಿಕ್ ಸೇರಿದಂತೆ ಎಲ್ಲಾ ಕ್ರೀಡೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಭಾಗಿಯಾಗಬೇಕು. ಎಲ್ಲಾ ಕ್ರೀಡೆಗಳಲ್ಲಿ ಭಾಗಿಯಾಗೋ ಮೂಲಕ ಭಾರತದ ಹೆಸರನ್ನು ಉತ್ತುಂಗಕ್ಕೆ ಏರಿಸಬೇಕು ಎಂದು ಹೇಳಿದರು.
Related Articles
Advertisement
ಒಡಿಸ್ಸಾದಲ್ಲಿ ಮೊದಲ ಬಾರಿಗೆ ಖೇಲೋ ಇಂಡಿಯಾ ನಡೆದಾಗ 118 ವಿವಿಗಳು ಮಾತ್ರ ಭಾಗಿಯಾಗಿದ್ದವು. ಆದರೆ ಇಂದು 208 ವಿವಿಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.
ಯೋಗ ಮತ್ತು ಮಲ್ಲಕಂಬವನ್ನು ಕೂಡ ಕ್ರೀಡೆಗೆ ಸೇರಿಸಲಾಗಿದೆ. ಅಲ್ಲದೆ ಗ್ರಾಮೀಣ ಆಟವನ್ನೂ ಕ್ರೀಡೆಗೆ ಸೇರಿಸಿ, ವಿಶ್ವದ ಗಮನ ಸೆಳೆದಿದ್ದೇವೆ.
ಕ್ರೀಡಾಕೊಟದಲ್ಲಿ ಗೆದ್ದ ಜೈನ್ ವಿವಿಗೆ ಅಭಿನಂದನೆ ಸಲ್ಲಿಸಿದ ಸಚಿವರು ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನ ಹೊಂದಿರೋ ದೇಶ ನಮ್ಮದು.ಇದೇ ರೀತಿಯ ಕ್ರೀಡೆಗಳ ಮೂಲಕ, ಆಟಡ ಮೂಲಕ ಒಲಿಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಗೆಲ್ಲಲು ಸಾಧ್ಯ, ನಾನು ಚಿಕ್ಕವನಾಗಿದ್ದಾಗ ಗುರೂಜಿಯವರು ಒಂದು ಮಾತು ಹೇಳಿದ್ದರು ‘ಕಷ್ಟ ಪಟ್ಟವನಿಗೆ ಸುಖ ಸಿಗಲಿದೆ ಅಂತ. ಸೋಲು ಅನ್ನೋದನ್ನ ತಳ್ಳಿ, ಗೆಲ್ಲುವತ್ತ ಮನಸು ಮಾಡಬೇಕು ಎಂದು ಕ್ರೀಡಾಳುಗಳನ್ನು ಹುರಿದುಂಬಿಸಿದರು. ಕರ್ನಾಟಕ ಸರ್ಕಾರ 75ಜನ ಕ್ರೀಡಾಪಟುಗಳನ್ನ ದತ್ತು ತೆಗೆದುಕೊಂಡಿದೆ. ಎಲ್ಲಾ ರಾಜ್ಯ ಸರ್ಕಾರಗಳು ಕೂಡ ದತ್ತು ತೆಗೆದುಕೊಂಡು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು. ಭಾರತ ಮುಂದೆ ಒಲಿಂಪಿಕ್ ನಲ್ಲಿ ದೊಡ್ಡ ಸಾಧನೆ ಮಾಡಲಿದೆ, ಗೆಲುವು ಸಾಧಿಸೋ ಮೂಲಕ ಉನ್ನತ ಸ್ಥಾನಕ್ಕೆ ಹೋಗಲಿದೆ. ಬೆವರು ಹರಿಸೋ ಮೂಲಕ ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿದ್ದಾರೆ. ಒಲಿಂಪಿಕ್ ನಲ್ಲಿ ಭಾಗಿಯಾಗಿ ಚಿನ್ನ ಗೆದ್ದು ಬನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.