Advertisement
ಪುತ್ತೂರಿನಲ್ಲಿ ಶನಿವಾರ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಶ್ಲಾ ಸುತ್ತಲೇ ಸಿಎಂ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸಿ ಎಂದು ಹೇಳಿ ಸಭಿಕರಿಂದ ಚಪ್ಪಾಳೆ ಹಾಕಿಸುವ ಮೂಲಕ ನಾಯಕತ್ವದ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.
Related Articles
Advertisement
“ನೀವು ಬಿಜೆಪಿಗೆ ಮತ ಹಾಕುತ್ತೀರಾ? ಜೋರಾಗಿ ಹೇಳಿ’ ಎಂದು ಕಾರ್ಯಕರ್ತ ರನ್ನು, ಸಭಿಕರನ್ನು ಹುರಿದುಂಬಿಸುವುದರ ಜತೆಗೆ “ಬೊಮ್ಮಾಯಿಯವರ ಕೈಗಳನ್ನು ಬಲಪಡಿಸು ತ್ತೀರಾ?’ ಎಂದು ಪ್ರಶ್ನೆ ಕೇಳಿ ಕಾರ್ಯಕರ್ತರು, ಅಭಿಮಾನಿಗಳಿಂದ ಜೈಕಾರ ಹಾಕಿಸಿದರು.
ಉಸ್ತುವಾರಿಗಳ ಜತೆಗೆ “ಪ್ರಧಾನ’ ಸಭೆ ಬೆಂಗಳೂರು: ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಫೆ. 18ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದ್ದು, ಕ್ಷೇತ್ರ ಚುನಾವಣ ಉಸ್ತುವಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಮೂಲಕ ಬಿಜೆಪಿಯ ಚುನಾವಣೆ ತಾಲೀಮು ಇನ್ನಷ್ಟು ಚುರುಕಾಗಲಿದೆ. ಸಮಗ್ರ ಉಸ್ತುವಾರಿಗಳ ಆಗಮನದ ದಿನವೇ ಕ್ಷೇತ್ರವಾರು ಉಸ್ತುವಾರಿಗಳ ಜತೆಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ ಈ ಸಭೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಡಲಾಗಿದೆ. 224 ಕ್ಷೇತ್ರಗಳ ಉಸ್ತುವಾರಿಗಳಿಗೂ ಮಾಹಿತಿ ನೀಡಲಾಗಿದ್ದು, ವಹಿಸಲಾದ ಕ್ಷೇತ್ರದ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಬರುವಂತೆ ಸೂಚಿಸಲಾಗಿದೆ. ಈ ಸಭೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಇರುವ ವಾಸ್ತವ ಚಿತ್ರಣದ ಬಗ್ಗೆ ಒಂದು ಹಂತದ ಮಾಹಿತಿ ಲಭ್ಯವಾಗುವುದರಿಂದ ಮುಂದಿನ ತಂತ್ರಗಾರಿಕೆ ದೃಷ್ಟಿಯಿಂದ ಮಹತ್ವದ್ದಾಗಿದೆ. ಒಂದೇ ಬಾಣ; ನಾಲ್ಕು ಹಕ್ಕಿ !
ಲಿಂಗಾಯತ ಸಮುದಾಯಕ್ಕೆ ಬಿಜೆಪಿ ನೀಡುವ ಆದ್ಯತೆಯಲ್ಲಿ ಕೊರತೆಯಾಗದು ಎಂಬ ಸಂದೇಶವನ್ನು ಶಾ ರವಾನಿಸಿದ್ದಾರೆ. ನಾಯಕತ್ವ ಬದಲಾವಣೆ ಸಾಧ್ಯತೆಯನ್ನೂ ತಳ್ಳಿ ಹಾಕಿ ಚುನಾವಣೆ ಎದುರಿಸುವುದು ಬೊಮ್ಮಾಯಿ ನೇತೃತ್ವದಲ್ಲೇ ಎಂಬುದನ್ನು ಮತ್ತೂಮ್ಮೆ ಖಚಿತಪಡಿಸಿದ್ದಾರೆ. ಕುಮಾರಸ್ವಾಮಿ ಅಸ್ತ್ರಕ್ಕೂ ಈ ಮೂಲಕ ಪ್ರತ್ಯುತ್ತರ ನೀಡಿದಂತಾಗಿದೆ. ಬಿಎಸ್‌ವೈ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ಉತ್ತರ ನೀಡಿದಂತಾಗಿದೆ. ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ
ಸೋಮವಾರ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರವಿವಾರ ಸಂಜೆ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಸೋಮವಾರ ಏರೋ ಇಂಡಿಯಾ ಶೋ-2023 ಉದ್ಘಾಟಿಸಲಿದ್ದಾರೆ.