Advertisement

ಹುಬ್ಬಳ್ಳಿ: ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದ ಅಮಿತ್ ಶಾ

09:55 AM Jan 20, 2020 | keerthan |

ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.

Advertisement

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ನಿವಾಸದ ಬಳಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ ಅವರು ಅಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.

ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನಿವಾಸದಲ್ಲಿ ಉಪಹಾರ ಸೇವಿಸಿದರು. ಜೋಶಿಯವರ ಕೋರಿಕೆಯ ಮೇರೆಗೆ ಅವರ ಮನೆಗೆ ಆಗಮಿಸಿದ ಅಮಿತ್ ಶಾ ಅವರಿಗೆ ಮನೆಯವರು ಅದ್ದೂರಿಯಾಗಿಯೇ ಸ್ಯಾಗತಿಸಿದರು.

ಶನಿವಾರ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರವಾದ ಬೃಹತ್ ಜನಜಾಗೃತಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next