ಬೆಂಗಳೂರು : ಒಂದೇ ವಾರದ ಅಂತರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಬಿಜೆಪಿಯಲ್ಲಿ ಇನ್ನಷ್ಟು ಚುನಾವಣೋತ್ಸಾಹ ಮೂಡಿಸಲಿದ್ದಾರೆ.
ಕಳೆದ ವಾರ ಬಳ್ಳಾರಿಯ ಸಂಡೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿ ಬೆಂಗಳೂರಿನ ಪುರಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಸಿದ್ದ ಶಾ, ಪಕ್ಷದ ಹಿರಿಯ ನಾಯಕರ ಜತೆಗೆ ಚರ್ಚೆ ನಡೆಸಿದ್ದರು. ಇದಾದ ಬಳಿಕ ಬಿಜೆಪಿ ಸಂಘಟನೆಯಲ್ಲಿ ಒಂದಿಷ್ಟು ಚಟುವಟಿಕೆ ತೀವ್ರಗೊಂಡಿತ್ತು.
ಶುಕ್ರವಾರ ಬೀದರ್‌ನ ಬಸವಕಲ್ಯಾಣದಲ್ಲಿ ಆರಂಭಗೊಳ್ಳಲಿರುವ ವಿಜಯ ಸಂಕಲ್ಪ ಯಾತ್ರೆ ಉದ್ಘಾಟನೆ ಹಿನ್ನೆಲೆಯಲ್ಲಿ ಅವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿರುವ ಅವರು ಶುಕ್ರವಾರ ಮಧ್ಯಾಹ್ನ 12.20 ಗಂಟೆಗೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥಯಾತ್ರೆಯನ್ನು ಉದ್ಘಾಟಿಸುವರು. ಬಳಿಕ 1.15 ಕ್ಕೆ ಬಸವಕಲ್ಯಾಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.50ಕ್ಕೆ ಅವರು ಆವಟಿಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಕೊಡಲಿ¨ªಾರೆ. 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ 4ನೇ ರಥ ಯಾತ್ರೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ಪುರಭವನದಲ್ಲಿ ಬೆಂಗಳೂರು ಸೇಫ್ ಸಿಟಿ ಪ್ರಾಜೆಕ್ಟ್ಗೆ ಚಾಲನೆ ನೀಡಿದ ಬಳಿಕ ದೆಹಲಿಗೆ ಹಿಂತಿರುಗಲಿದ್ದಾರೆ.