Advertisement

ಬಿಜೆಪಿ ಹಿರಿಯ ನಾಯಕ ಆಡ್ವಾಣಿ ನಿವಾಸಕ್ಕೆ ಶಾ ಭೇಟಿ

08:53 AM Jul 23, 2020 | mahesh |

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬುಧವಾರ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ(92) ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಇದೇ ಶುಕ್ರವಾರ ವಿಶೇಷ ಸಿಬಿಐ ಕೋರ್ಟ್‌ ವೀಡಿಯೋ ಲಿಂಕ್‌ ಮೂಲಕ ಆಡ್ವಾಣಿ ಅವರ ಹೇಳಿಕೆಯನ್ನು ದಾಖಲಿಸಿ ಕೊಳ್ಳಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಸರಕಾರಿ ವಕೀಲರ ಗುಂಪಿನೊಂದಿಗೆ ಆಡ್ವಾಣಿ ನಿವಾಸಕ್ಕೆ ಆಗಮಿಸಿದ ಅಮಿತ್‌ ಶಾ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ದಿನಂಪ್ರತಿ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಆಗಸ್ಟ್‌ 31ರೊಳಗಾಗಿ ತೀರ್ಪು ನೀಡುವ ಸಾಧ್ಯತೆಯಿದೆ. ಇದೇ ವೇಳೆ, ಸದ್ಯದಲ್ಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿರುವ ಹಿನ್ನೆಲೆಯಲ್ಲೂ ಶಾ-ಆಡ್ವಾಣಿ ಭೇಟಿ ಕುತೂಹಲ ಮೂಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next