Advertisement

ಬೆಂಗಳೂರು: ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

10:12 AM Oct 21, 2019 | Mithun PG |

ಬೆಂಗಳೂರು: ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಹೃದಯಘಾತದಿಂದ ಮೃತಪಟ್ಟಿರುವ  ಘಟನೆ ಪೀಣ್ಯ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

Advertisement

ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಪ್ರೆಶರ್ಸ್ ಡೇ ಪ್ರಯುಕ್ತ ರ‍್ಯಾಂಪ್ ವಾಕ್ ಅಭ್ಯಾಸ ನಡೆಸಲಾಗುತ್ತಿತ್ತು. ಆ ವೇಳೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ಶಾಲಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಶಾಲಿನಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next