Advertisement

“ಅಮೃತ ಮಹೋತ್ಸವ’ಸಿದ್ಧತೆ ಶುರು

06:49 PM Mar 26, 2021 | Team Udayavani |

ಬೀದರ: 75ನೇ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಸುವುದಕ್ಕೆ ಸಂಬಂಧಿ ಸಿದಂತೆ ಚರ್ಚಿಸಲು ನಗರದ ಜಿಪಂ ಸಭಾಂಗಣದಲ್ಲಿ ಸಿಇಒ ಜಹೀರಾ ನಸೀಮ್‌ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

Advertisement

ಈ ವೇಳೆ ಮಾತನಾಡಿದ ಸಿಇಒ ಅವರು, 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ 75 ವಾರಗಳ ಕಾಲ ರಾಷ್ಟ್ರಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯುವಂತೆ ಆಯಾ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

ಪ್ರತಿವಾರ ಜರುಗುವ ಕಾರ್ಯಕ್ರಮದ ವರದಿಯನ್ನು ಕೇಂದ್ರಕ್ಕೆ ಈ ಡಾಕ್ಯುಮೆಂಟ್ ಮಾಡಿ ವರದಿ ನೀಡಬೇಕಾಗುತ್ತದೆ. ಆದ್ದರಿಂದ ಕಾರ್ಯಕ್ರಮ ಪೂರ್ಣಗೊಂಡ ಕೂಡಲೇ ಆಯಾ ಇಲಾಖೆಗಳು ಕಾರ್ಯಕ್ರಮದ ಸುದ್ದಿ ಮತ್ತು ಭಾವಚಿತ್ರಗಳು ಹಾಗೂ ವಿಡಿಯೋ ತುಣುಕುಗಳನ್ನು ಕಳುಹಿಸಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮವು ಇಡೀ ರಾಷ್ಟ್ರಾದ್ಯಂತ ಅಚ್ಚುಕಟ್ಟಾಗಿ ನಡೆಯಬೇಕು ಎಂಬುದು ಪ್ರಧಾನಿಗಳ ಸೂಚನೆಯಾಗಿದೆ.

ಆದ್ದರಿಂದ ಆಯಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ನಿತ್ಯದ ಕೆಲಸ ಕಾರ್ಯಗಳ ಜೊತೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಹಕರಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್‌ ಮಾರ್ಗಸೂಚಿಯಂತೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಸಿಇಒ, ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿ ಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಾದ ಬಿ.ಬಾಬುರೆಡ್ಡಿ, ಗೌತಮ ಅರಳಿ, ಆರ್‌.ಜಿ ನಾಡಗೀರ್‌, ಡಾ| ವಿ.ಜಿ.ರೆಡ್ಡಿ, ಲೀಡ್‌ ಬ್ಯಾಂಕಿನ ಮ್ಯಾನೇಜರ್‌ ಬಿ.ಎಂ. ಕಮತಗಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next