Advertisement
ವಿಧಾನಸೌಧದಲ್ಲಿ ಇಂದು ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆಯಲ್ಲಿ ಸಚಿವ ಎಂಟಿಬಿ ನಾಗರಾಜು ಅವರು, ಈಗಾಗಲೇ ಅನುಮೋದನೆ ನೀಡಿರುವ ಕ್ರಿಯಾ ಯೋಜನೆಗಳ ಟೆಂಡರ್ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆಗಸ್ಟ್ ತಿಂಗಳಲ್ಲಿ ಕಾಮಗಾರಿಗಳನ್ನು ಆರಂಭಿಸುವಂತೆ ನಿರ್ದೇಶಕನ ನೀಡಿದರು.
Related Articles
Advertisement
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗುತ್ತಿವೆ.
ಈ ಯೋಜನೆಯಡಿ 117 ಪಟ್ಟಣ ಪಂಚಾಯತಿಗಳು ತಲಾ 5 ಕೋಟಿ ರೂ., 124 ಪುರಸಭೆಗಳು ತಲಾ 10 ಕೋಟಿ ರೂ. ಹಾಗೂ 38 ನಗರಸಭೆಗಳು ತಲಾ 30 ಕೋಟಿ ರೂ., 23 ಜಿಲ್ಲಾ ಕೇಂದ್ರದ ನಗರಸಭೆಗಳು ಮತ್ತು 1ನೇ ದರ್ಜೆ ನಗರಸಭೆಗಳು ತಲಾ 40 ಕೋಟಿ ರೂ. ಪಡೆಯಲಿವೆ. ಈ ಹಣದಲ್ಲಿ 2022-23 ರಿಂದ 2023-24ನೇ ಸಾಲಿನ ಹಣಕಾಸು ವರ್ಷದವರೆಗೆ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಮಳೆ ನೀರು ಚರಂಡಿ ಅಭಿವೃದ್ಧಿ ಮತ್ತು ಕಟ್ಟಡ ನಿರ್ಮಾಣ ಹಾಗೂ ಇತರೇ ಕಾಮಗಾರಿಗಳನ್ನು ಕೈಗೊಳ್ಳಲಿವೆ.ಇದೇ ಸಂದರ್ಭದಲ್ಲಿ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಎಂಟಿಬಿ ನಾಗರಾಜು, ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಆಕ್ಷೇಪಗಳು ವ್ಯಕ್ತವಾಗಿದ್ದು,ಆ ಬಗ್ಗೆ ಚರ್ಚಿಸಿ ಎಲ್ಲಾ ವೃಂದದ ಅಧಿಕಾರಿಗಳಿಗೆ ಪದೋನ್ನತಿ ಹಕ್ಕನ್ನು ಒದಗಿಸಲು ಅಗತ್ಯ ಕ್ರಮಕ್ಕೆ ಸೂಚಿಸಿದರು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ಇಲಾಖೆ ನಿರ್ದೇಶಕಿ ಶ್ರೀಮತಿ ಅರ್ಚನಾ,ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಮತ್ತಿತ್ತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.