Advertisement
ಈವರೆಗೆ ಸರಕಾರಗಳು ವಸತಿ ರಹಿತರು ಮತ್ತು ನಿವೇಶನ ರಹಿತರಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಗ್ರಾಮ ಪಂಚಾಯತ್ ವ್ಯಾಪ್ತಿ ಯೊಂದರ ಅರ್ಹ ರೆಲ್ಲರಿಗೂ ವಸತಿ, ನಿವೇಶನ ಒದಗಿಸುವ ಯೋಜನೆ ಇದೇ ಮೊದಲು. ಅಮೃತ ಗ್ರಾಮೀಣ ವಸತಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ 27, ಉಡುಪಿಯ 19 ಗ್ರಾಮ ಪಂಚಾಯತ್‌ಗಳು ಆಯ್ಕೆ ಆಗಿವೆ.
ದಕ್ಷಿಣ ಕನ್ನಡದಲ್ಲಿ ಆಯ್ಕೆಯಾಗಿ ರುವ ಗ್ರಾ. ಪಂಚಾಯತ್‌ಗಳಲ್ಲಿ 2,390 ಮಂದಿ ವಸತಿ ರಹಿತರಿದ್ದಾರೆ. 1,908 ಮಂದಿ ವಸತಿ, ನಿವೇಶನ ಎರಡೂ ಇಲ್ಲದವರು. ಉಡುಪಿ ಜಿಲ್ಲೆಯ 19 ಗ್ರಾಮ ಪಂಚಾಯತ್‌ಗಳಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ವಸತಿ/ನಿವೇಶನ ದೊರೆಯುವ ಸಾಧ್ಯತೆ ಇದೆ. ಯಾವ ಗ್ರಾ.ಪಂ.ಗಳು?
ದ.ಕ.ದ ಬಂಟ್ವಾಳ ತಾಲೂಕಿನ ಅಮಾrಡಿ, ಕುಕ್ಕಿಪಾಡಿ, ಪಂಜಿಕಲ್ಲು, ಸರಪಾಡಿ, ಇಡ್ಕಿದು, ಇರಾ, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಮಡಂತ್ಯಾರು, ಕೊಕ್ಕಡ, ಉಜಿರೆ, ಹೊಸಂಗಡಿ, ಪಡಂಗಡಿ, ಕಡಬ ತಾಲೂಕಿನ ಅಲಂಕಾರು, ಎಡಮಂಗಲ, ಮಂಗಳೂರು ತಾಲೂಕಿನ
ಮುನ್ನೂರು, ಐಕಳ, ಮುಚ್ಚಾರು, ಎಕ್ಕಾರು, ಮೂಡುಬಿದಿರೆ ತಾಲೂಕಿನ ಬೆಳುವಾಯಿ, ತೆಂಕಮಿಜಾರು, ಪುತ್ತೂರಿನ ನಿಡ್ಪಳ್ಳಿ ,ಬಲ್ನಾಡು , ಪಾಣಾಜೆ, ಸುಳ್ಯದ ಬಾಳಿಲ, ಮರ್ಕಂಜ, ಮಂಡೆಕೋಲು ಗ್ರಾ.ಪಂ.ಗಳು ಆಯ್ಕೆಯಾಗಿವೆ. ಉಡುಪಿ ಜಿಲ್ಲೆಯ 19 ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 750 ಗ್ರಾ.ಪಂ.ಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ.
Related Articles
Advertisement
ಖಾಸಗಿ ಜಮೀನು ಖರೀದಿ ಆಯ್ಕೆಯಾಗಿರುವ ಗ್ರಾ.ಪಂ.ಗಳಲ್ಲಿ ಸರಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನನ್ನು ಸರಕಾರದ ಮಾರ್ಗಸೂಚಿಗಳನ್ವಯ ಖರೀದಿಸಿ ಒದಗಿಸಬೇಕು. 2018ರ ಸಮೀಕ್ಷೆಯಲ್ಲಿನ ವಸತಿ ರಹಿತರ ಪಟ್ಟಿಯನ್ನು ಪರಿಶೀಲಿಸಿ ಅರ್ಹರು ಬಿಟ್ಟು ಹೋಗಿದ್ದರೆ ಸೇರ್ಪಡೆ ಮಾಡಿ ಗ್ರಾಮಸಭೆ ಮೂಲಕ ಏಕಕಾಲದಲ್ಲಿ ಆಯ್ಕೆ ಮಾಡಬೇಕು ಎಂದು ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೂಚನೆ ನೀಡಿದ್ದಾರೆ.
27 ಗ್ರಾ.ಪಂ.ಗಳನ್ನುಆಯ್ಕೆ ಮಾಡುವಾಗ ಬಹುತೇಕ ಸರಕಾರಿ ನಿವೇಶನ ಲಭ್ಯ ಇರುವ ಗ್ರಾ.ಪಂ.ಗಳನ್ನೇ ಆರಿಸಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಹಾಗಾಗಿ ಅರ್ಹರೆಲ್ಲರಿಗೂ ವಸತಿ ಮತ್ತು ನಿವೇಶನ ದೊರೆಯಲಿದೆ.– ಡಾ| ಕುಮಾರ್, ದ.ಕ. ಜಿ.ಪಂ. ಸಿಇಒ ಅಮೃತ ಗ್ರಾಮೀಣ
ವಸತಿ ಯೋಜನೆಗೆ ಉಡುಪಿ ಜಿಲ್ಲೆಯ 19 ಗ್ರಾ.ಪಂ.ಗಳನ್ನು ಆಯ್ಕೆ ಮಾಡಬೇಕಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಆಯ್ಕೆ ಪೂರ್ಣಗೊಳಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿ ಸಲು ಒಂದು ವಾರದ ಅವಕಾಶವಿದೆ, ನಿಗ ದಿತ ಅವಧಿಯೊಳಗೆ ಅಂತಿಮಗೊಳಿ ಸಲಾಗುವುದು.
-ಡಾ| ನವೀನ್ ಭಟ್,
ಉಡುಪಿ ಜಿ.ಪಂ. ಸಿಇಒ - ಸಂತೋಷ್ ಬೊಳ್ಳೆಟ್ಟು