ಪಂಜಾಬ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿರುವ ಸ್ವಘೋಷಿತ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಎನ್‌ಐಎ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ವತಿಯಿಂದ ಈ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನ ಪ್ರಕಟವಾಗುವ ಸಾಧ್ಯತೆ ಇದೆ. ಜತೆಗೆ ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅನ್ವಯ ಕೇಸು ದಾಖಲಿಸಲೂ ಪರಿಶೀಲನೆಗಳು ನಡೆದಿವೆ. ಇದೇ ವೇಳೆ, ಅಮೃತ್‌ಪಾಲ್‌ಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಲಿಂಕ್ ಇದೆ ಎಂದು ಜಲಂಧರ್ ವಲಯದ ಡಿಐಜಿ ಹೇಳಿದ್ದಾರೆ.
ಮತ್ತೊಂದು ಬೆಳವಣಿಗೆಯಲ್ಲಿ “ವಾರಿಸ್ ಪಂಜಾಬ್ ದೇ’ ಸಂಘಟನೆಯ ಕಾನೂನು ಸಲಹೆಗಾರ ಪಂಜಾಬ್ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿ, ಸಂಘಟನೆಯ ನಾಯಕ ಅಮೃತ್ ಪಾಲ್‌ನನ್ನು ಹುಡುಕಿ ಕೊಡುವಂತೆ ಹೆಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದಾರೆ. ಅದನ್ನು ಪರಿಗಣಿಸಿ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.