Advertisement
ಮೆಸ್ಕಾಂ ವ್ಯಾಪ್ತಿಯಲ್ಲಿ ಈ ಯೋಜನೆಯ ಅನುಷ್ಠಾನದ ಬಗ್ಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯ ಪ್ರಗತಿಯಲ್ಲಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರವರ್ಗದ ವಿದ್ಯುತ್ ಸ್ಥಾವರಗಳಿಗೆ ಮಾಸಿಕ 75 ಯೂನಿಟ್‌ಗಳ ವರೆಗೆ ಬಳಕೆಯ ವಿದ್ಯುತ್ ಶುಲ್ಕದ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ಮರುಪಾವತಿಸಲಾಗುವುದು. ಈ ಪ್ರವರ್ಗದ ವಿದ್ಯುತ್ ಸ್ಥಾವರಗಳಿಗೆ ಮಾಪಕ ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
Related Articles
Advertisement
ಗ್ರಾಹಕರು ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಬ್ಯಾಂಕ್ ಖಾತೆಯ ಸಂಖ್ಯೆ ಹಾಗೂ ಸಂಬಂಧಿಸಿದ ಇತರ ಮಾಹಿತಿಗಳನ್ನು ಒದಗಿಸಬೇಕು. ಈ ಪ್ರವರ್ಗದ ವಿದ್ಯುತ್ ಗ್ರಾಹಕರು 30.04.2022ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದ್ದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿ ಮತ್ತು ನೋಂದಣಿಯ ಮಾರ್ಗದರ್ಶನಕ್ಕಾಗಿ ಸಮೀಪದ ಮೆಸ್ಕಾಂ ಉಪವಿಭಾಗ ಕಚೇರಿಯನ್ನು ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.