Advertisement

ಎಸ್‌ಸಿ/ಎಸ್‌ಟಿ ಬಿಪಿಎಲ್‌ ಗ್ರಾಹಕರಿಗೆ “ಅಮೃತಜ್ಯೋತಿ’ಉಚಿತ ವಿದ್ಯುತ್‌

11:07 PM Jan 09, 2023 | Team Udayavani |

ಮಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳ ಗೃಹ ವಿದ್ಯುತ್‌ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್‌ ಒದಗಿಸುವ “ಅಮೃತ ಜ್ಯೋತಿ’ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆ.

Advertisement

ಮೆಸ್ಕಾಂ ವ್ಯಾಪ್ತಿಯಲ್ಲಿ ಈ ಯೋಜನೆಯ ಅನುಷ್ಠಾನದ ಬಗ್ಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯ ಪ್ರಗತಿಯಲ್ಲಿದೆ.

ಮುಖ್ಯಾಂಶಗಳು
ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರವರ್ಗದ ವಿದ್ಯುತ್‌ ಸ್ಥಾವರಗಳಿಗೆ ಮಾಸಿಕ 75 ಯೂನಿಟ್‌ಗಳ ವರೆಗೆ ಬಳಕೆಯ ವಿದ್ಯುತ್‌ ಶುಲ್ಕದ ಮೊತ್ತವನ್ನು ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರವಾಗಿ ಮರುಪಾವತಿಸಲಾಗುವುದು.

ಈ ಪ್ರವರ್ಗದ ವಿದ್ಯುತ್‌ ಸ್ಥಾವರಗಳಿಗೆ ಮಾಪಕ ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

ಗ್ರಾಹಕರು ಈ ಸೌಲಭ್ಯವನ್ನು ಪಡೆಯಲು ಬಿಪಿಎಲ್‌ ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಮತ್ತು ಜಾತಿ ಪ್ರಮಾಣ ಪತ್ರದ ದೃಢೀಕೃತ ದಾಖಲೆ ಒದಗಿಸುವುದು ಕಡ್ಡಾಯ. ಈ ಸೌಲಭ್ಯಕ್ಕೆ ಅರ್ಹರಾಗುವ ಈ ಪ್ರವರ್ಗದ ವಿದ್ಯುತ್‌ ಗ್ರಾಹಕರು ಮಾಸಿಕ ವಿದ್ಯುತ್‌ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ಅನಂತರ ಅವರಿಗೆ ಸರಕಾರದ ಸಹಾಯಧನವನ್ನು ಮರು ಪಾವತಿಸಲಾಗುವುದು.

Advertisement

ಗ್ರಾಹಕರು ವಿದ್ಯುತ್‌ ಸರಬರಾಜು ಕಂಪೆನಿಗಳಿಗೆ ಬ್ಯಾಂಕ್‌ ಖಾತೆಯ ಸಂಖ್ಯೆ ಹಾಗೂ ಸಂಬಂಧಿಸಿದ ಇತರ ಮಾಹಿತಿಗಳನ್ನು ಒದಗಿಸಬೇಕು. ಈ ಪ್ರವರ್ಗದ ವಿದ್ಯುತ್‌ ಗ್ರಾಹಕರು 30.04.2022ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್‌ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದ್ದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿ ಮತ್ತು ನೋಂದಣಿಯ ಮಾರ್ಗದರ್ಶನಕ್ಕಾಗಿ ಸಮೀಪದ ಮೆಸ್ಕಾಂ ಉಪವಿಭಾಗ ಕಚೇರಿಯನ್ನು ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next