Advertisement
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ತಾಲೂಕಾಡಳಿತ ಸಂಯುಕ್ತಾಶ್ರಯದಲ್ಲಿ ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಬ್ರಿಟಿಷರ ವಿರುದ್ಧ ಅನೇಕರು ಶಸ್ತ್ರಸಹಿತವಾಗಿ ಹೋರಾಟ ಮಾಡಿದ್ದರು. ಸ್ವಾತಂತ್ರ್ಯ ದೊರೆಯಲು ಅದು ದೊಡ್ಡ ಪಾತ್ರ ವಹಿಸಿತು ಎಂಬುದನ್ನು ಬ್ರಿಟಿಷ್ ಅಧಿಕಾರಿಗಳೇ ಒಪ್ಪಿಕೊಂಡಿದ್ದರೆ ಬಗ್ಗೆ ದಾಖಲೆಗಳಿವೆ. ಆದರೆ ಇತಿಹಾಸದಲ್ಲಿ ಸರಿಯಾದ ಮಾಹಿತಿ ನೀಡಿಕೆ ಆಗಿಲ್ಲ ಎಂದರು.
Related Articles
Advertisement
ಆಕ್ರಮಣಗಳಿಂದ ದೇಶದ ಸಂಸ್ಕೃತಿ-ಪರಂಪರೆ ಜಗಿಲ್ಗ : ಶೆಟ್ಟರ
ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರ ಹೋರಾಟ, ತ್ಯಾಗ-ಬಲಿದಾನವಿದೆ. ಕರ್ನಾಟಕದಲ್ಲಿ ಕಿತ್ತೂರು ರಾಣಿ ಚನ್ಮಮ್ಮ, ಸಂಗೊಳ್ಳಿ ರಾಯಣ್ಣರಂತಹ ವೀರರ ಹೋರಾಟ ಸ್ಮರಣೀಯ. ದೇಶದ ಮೇಲೆ ಅನೇಕ ಆಕ್ರಮಣಗಳು ನಡೆದಿವೆ. ನೂರಾರು ವರ್ಷಗಳ ಆಳ್ವಿಕೆ ಮಾಡಿದರೂ ದೇಶದ ಸಂಸ್ಕೃತಿ, ಪರಂಪರೆ ಕಿಂಚಿತ್ತು ಕುಂದಿಲ್ಲ. ದೇಶದ ಇತಿಹಾಸ, ಸಂಸ್ಕೃತಿ, ಪರಂಪರೆ ಬಗ್ಗೆ ಯುವಕರು ಹೆಮ್ಮೆಯೊಂದಿಗೆ ಅಧ್ಯಯನ ಮಾಡಬೇಕು. ಬೆಂಗೇರಿಯ ರಾಷ್ಟ್ರಧ್ವಜ ನಿರ್ಮಾಣ ಕೇಂದ್ರ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಕೊಡುಗೆ ಹಾಗೂ ಸ್ಫೂರ್ತಿ ನೀಡಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಪ್ರಾಸ್ತಾವಿಕ ಮಾತನಾಡಿದರು.
ಉಪ ಮಹಾಪೌರ ಉಮಾ ಮುಕುಂದ, ವಿವಿಧ ನಿಗಮ-ಮಂಡಳಿ ಅಧ್ಯಕ್ಷರಾದ ಈರಣ್ಣ ಜಡಿ, ಸವಿತಾ ಅಮರಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಸ್. ಕೆಳದಿಮಠ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಇನ್ನಿತರರು ಇದ್ದರು.
ರವಿ ಕುಲಕರ್ಣಿ ನಿರೂಪಿಸಿದರು. ವಿವಿಧ ಶಾಲಾ ಮಕ್ಕಳು ಹಾಗೂ ಕಲಾ ತಂಡಗಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಗಾಂಧಿ ವೇಷಧಾರಿ ಮಂಜಪ್ಪ ತಿರ್ಲಾಪುರ ಗಮನ ಸೆಳೆದರು.