Advertisement
ಈ ಸಂಬಂಧ ಟ್ವೀಟ್ ಮಾಡಿರುವ ಸಂತೋಷ್, ಅಮುಲ್ ಹೆಜ್ಜೆಗಳು ಕರ್ನಾಟಕದಲ್ಲಿ ಮೂಡಿದ್ದು 2017ರಲ್ಲಿ. ಆಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವೇ ಇತ್ತು. ವಿಚಿತ್ರವೆಂದರೆ ಈಗ ಅವರು ಮತ್ತು ಅವರ ಕಾಂಗ್ರೆಸ್ ನಾಯಕರು ಅದೇ ಅಮುಲ್ ಹಾಗೂ ಅದರ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಬಿಜೆಪಿ ಅವಕಾಶ ಕಲ್ಪಿಸಿದೆ ಎಂದು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಮತ್ತೊಂದೆಡೆ ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಂದಿನಿಯ ಬ್ರ್ಯಾಂಡ್ ಮೌಲ್ಯ ಎಷ್ಟರಮಟ್ಟಿಗೆ ಹೆಚ್ಚಿದೆ ಎಂಬುದು ಅಂಕಿಅಂಶಗಳನ್ನು ಗಮನಿಸಿದರೆ ಗೊತ್ತಾಗುತ್ತದೆ. ಆದರೆ ಕಾಂಗ್ರೆಸ್ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಗೊಂದಲ ಉಂಟುಮಾಡುವ ಕೀಳು ರಾಜಕೀಯವನ್ನು ಉಗ್ರವಾಗಿ ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ. 2018ರಲ್ಲಿ ನಿತ್ಯ 84 ಲಕ್ಷ ಲೀಟರ್ ನಂದಿನಿ ಹಾಲು ಉತ್ಪಾದನೆ ಆಗುತ್ತಿತ್ತು. ಪ್ರಸ್ತುತ 94 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದೆ. ನಂದಿನಿ ಹಾಲಿಗೆ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಎಲ್ಲ ರಾಜ್ಯಗಳಲ್ಲೂ ದೊರೆಯುತ್ತಿದೆ. ಹೊರ ದೇಶಗಳಿಗೂ ರಫ್ತಾಗುತ್ತಿದೆ. ಆದರೆ ಕಾಂಗ್ರೆಸ್ ಸುಳ್ಳು ಸುದ್ದಿ ಹರಿಬಿಡುತ್ತಿದೆ ಎಂದಿದ್ದಾರೆ.