ಸಾಗರ: ಜೋಗ ಅಭಿವೃದ್ಧಿಗೆ 185 ಕೋಟಿ ರೂ. ಪ್ರಥಮ ಹಂತದಲ್ಲಿ ಬಿಡುಗಡೆಯಾಗಿ, 155 ಕೋಟಿ ರೂ. ವೆಚ cದಲ್ಲಿ ವಿವಿಧ ಕಾಮಗಾರಿ ನಡೆಯುತ್ತಿದೆ. ಈ ಅನುದಾನಕ್ಕೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ರೋಪ್‌ವೇ, ಹೈಟೆಕ್ ಹೋಟೆಲ್ ನಿರ್ಮಾಣಕ್ಕೆ 116 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಜೋಗ ಸಮಗ್ರ ಅಭಿವೃದ್ಧಿಗೆ ಪುನಃ 116 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ಸಹಕಾರ ನೀಡಿದ್ದಾರೆ ಎಂದರು. ವಿಶ್ವವಿಖ್ಯಾತ ಜೋಗ ಜಲಪಾತ ಸಮಗ್ರ ಅಭಿವೃದ್ಧಿನಮ್ಮಕನಸು.ಈನಿಟ್ಟಿನಲ್ಲಿನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಮೇರೆಗೆ 185 ಕೋಟಿ ರೂ. ಬಿಡುಗಡೆ ಮಾಡಿದ್ದರು.
ನಂತರ ನಾನು ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರು ಈಗಿನ ಮುಖ್ಯಮಂತ್ರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿ¨ವು ೆª .ಈಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 116 ಕೋಟಿ ರೂ. ಬಿಡುಗಡೆ ಮಾಡಿದ್ದು, ಒಟ್ಟಾರೆ 300 ಕೋಟಿ ರೂ. ವೆಚ್ಚದಲ್ಲಿ ಜೋಗ ಜಲಪಾತ ಪ್ರದೇಶ ಅಭಿವೃದ್ಧಿಯಾಗಲಿದೆ. ಪರಿಸರ ಉಳಿಸಿಕೊಳ್ಳುವ ಮೂಲಕ ಜೋಗ ಅಭಿವೃದ್ಧಿಪಡಿಸಲಾಗುತ್ತದೆ ಎಂದರು. ಭ್ರಷ್ಟಾಚಾರ ಮಾಡುವ ಅಗತ್ಯವಿಲ್ಲ: ಜೋಗ ಜಲಪಾತ ಪ್ರದೇಶ ಅಭಿವೃದ್ಧಿಗೆ ಬಂದ ಹಣದಲ್ಲಿ ಭ್ರಷ್ಟಾಚಾರ ಮಾಡಬೇಕು ಎನ್ನುವ ಉದ್ದೇಶ ನನಗೆ ಇಲ್ಲ. ನನಗೆ ನನ್ನದೇ ಅದ ವ್ಯವಹಾರವಿದೆ. ನಾನು ರಾಜಕೀಯಕ್ಕೆ ಬರುವ ಮೊದಲೇ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದೆ ರಾಜಕಾರಣದಲ್ಲಿ ಹೇಗೋ ಹಣ ಬರುತ್ತದೆ, ಹೋಗುತ್ತದೆ. ನಾನು ಸಾಗರದಲ್ಲಿ ಮನೆ ಕಟ್ಟಿಲ್ಲ. ನನ್ನ ವಿರುದ್ಧ ಕೆಲವರು ಭ್ರಷ್ಟಾಚಾರದ ಆರೋಪ ಮಾಡುವುದನ್ನು ನೋಡಿದರೆ ನಗು ಬರುತ್ತದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಸಮಗ್ರ ಜೋಗ ಜಲಪಾತ ಅಭಿವೃದ್ಧಿಯಲ್ಲಿ ಶಾಸಕರ ಪಾತ್ರ ಮಹತ್ವದ್ದಾಗಿದೆ. ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳಿಗೆ ಸಂಸದರ ಸಹಕಾರದಿಂದ ಮನವೊಲಿಸಿ ಹಣ ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಾಗರ ಕ್ಷೇತ್ರದ ಜನತೆಯ ಪರವಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.