Advertisement

Aravind Bellad: ತುಮುಕೂರಿನಲ್ಲಿ ವಿಮಾನ ನಿಲ್ದಾಣವಾಗಬೇಕು: ಅರವಿಂದ ಬೆಲ್ಲದ

12:47 PM Oct 20, 2024 | Team Udayavani |

ಹುಬ್ಬಳ್ಳಿ: ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಭಾಗದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರಕಾರ ಮುಂದಾಗಬೇಕು. ಯಾವುದೇ ಕಾರಣಕ್ಕೂ ಇತರೆ ಭಾಗಗಳ ಬಗ್ಗೆ ಚಿಂತನೆ ಮಾಡಬಾರದು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಬಳಿ ಹೊಸ ನಿಲ್ದಾಣಯಾಗಬೇಕು. ಸಲಹಾ ಸಂಸ್ಥೆಯ ಅಭಿಪ್ರಾಯಕ್ಕೆ ಮನ್ನಣೆ ಕೊಡದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಬೇಕು. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಶಾಸಕರು ಕೂಡ ಈ ಬಗ್ಗೆ ಧ್ವನಿ ಎತ್ತಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಬೆಂಗಳೂರಿನ ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣದಿಂದ ಆ ಭಾಗ ಸೇರಿದಂತೆ ಆಂದ್ರ ಪ್ರದೇಶ ಗಡಿ ಭಾಗಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ತಮಿಳುನಾಡು ರಾಜ್ಯದ ಭಾಗದಲ್ಲಿ ಸಾಕಷ್ಟು ಬೆಳವಣಿಗೆ ಕಂಡಿದೆ. ಹೀಗಾಗಿ ತುಮಕೂರು ಬಳಿ ನಿಲ್ದಾಣವಾದರೆ ಸುತ್ತಲಿನ ಮೂರ್ನಾಲ್ಕು ಜಿಲ್ಲೆಗಳು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿದೆ. ಇದೀಗ ಸರಕಾರ ಬಿಡದಿ, ವೈಟಫೀಲ್ಡ್ ಸೇರಿದಂತೆ ಇತರೆ ಪ್ರದೇಶಗಳ ಬಗ್ಗೆ ಹೆಚ್ಚಿನ ಒಲವು ತೋರುತ್ತಿದೆ. ಎಂ.ಬಿ.ಪಾಟೀಲ ಅವರು ಈ ಭಾಗದವರೇ ಕೈಗಾರಿಕೆ ಸಚಿವರಾಗಿದ್ದು, ಈ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next