ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 21ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ ಪ್ರದೇಶದಲ್ಲಿ 21 ಮತ್ತು 22ರಂದು ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಈ ವಾರಪೂರ್ತಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲಲ್ಲಿ ಸಿಡಿಲು ಕೂಡ ಇರಲಿದ್ದು, ಕೆಲವೊಂದು ಕಡೆ ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಸೆಕೆಯ ಬೇಗೆ ತುಸು ಹೆಚ್ಚು ಇತ್ತು.
ಮಂಗಳೂರಿನಲ್ಲಿ ಬುಧವಾರ 30 ಡಿ.ಸೆ. ಗರಿಷ್ಠ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.