Advertisement
ಜೆಡಿಎಸ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಪ್ರಶ್ನೆಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಹೆಚ್ಚಿನ ಅನುದಾನ ಬರುತ್ತಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಇದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಅಥವಾ ಏಷ್ಯಾ ಆರೋಗ್ಯ ಅಭಿವೃದ್ಧಿ ಬ್ಯಾಂಕ್ ಮೂಲಕ ಸಾಲ ಪಡೆಯುವ ಬಗ್ಗೆಯೂ ಯೋಚನೆ ಮಾಡುತ್ತಿದ್ದೇವೆ ಎಂದರು. ತುರ್ತು ಸೇವೆ ನೀಡಲು 108 ಆ್ಯಂಬುಲೆನ್ಸ್‌ಗಳು ಸೇವೆ ಸಲ್ಲಿಸುತ್ತಿವೆ. ಇದರ ಜತೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೃದ್ರೋಗ, ತುರ್ತು ಸೇವೆ, ಟೆಲಿ ಮೆಡಿಷಿನ್, ಟೆಲಿ ಐಸಿಯು ಒಳಗೊಂಡ 11 ಸೇವೆ ಒದಗಿಸುವ ಸುಸಜ್ಜಿತ ಆ್ಯಂಬುಲೆನ್ಸ್‌ಗಳು ಬರಲಿವೆ ಎಂದು ಹೇಳಿದರು.
Advertisement
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೊಂದು ಆ್ಯಂಬುಲೆನ್ಸ್
04:28 PM Feb 02, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.