Advertisement

“ದಿನಕ್ಕೆ ಸರಾಸರಿ 100 ಕೋವಿಡ್‌ ಪೀಡಿತರು ಬಿಡುಗಡೆ’

10:57 PM Jun 06, 2020 | Sriram |

ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾಗಿರುವ ಕೋವಿಡ್‌ ಪ್ರಕರಣಗಳಲ್ಲಿ 132 ಮಂದಿ ಬಿಡುಗಡೆ ಯಾಗಿದ್ದಾರೆ. 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣ ಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಬಿಡುಗಡೆ ಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದರು.

Advertisement

ಜಿ.ಪಂ.ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.

12,258 ಮಾದರಿ ಸಂಗ್ರಹ
ಜಿಲ್ಲೆಯಲ್ಲಿ ಶುಕ್ರವಾರದ ವರೆಗೆ 12,258 ಮಂದಿಯ ಕೋವಿಡ್‌ ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 10,992 ಮಂದಿಯ ವರದಿ ನೆಗೆಟಿವ್‌ ಆಗಿದ್ದು, 769 ವರದಿ ಬರಲು ಬಾಕಿ ಇದೆ. ಪಾಸಿಟಿವ್‌ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳಿಲ್ಲ. ಪಾಸಿಟಿವ್‌ ಪ್ರಕರಣಗಳ ಚಿಕಿತ್ಸೆಗೆ ಟಿಎಂಎ ಪೈ ಆಸ್ಪತ್ರೆಯಲ್ಲಿ 125, ಕಾರ್ಕಳದಲ್ಲಿ 75, ಎಸ್‌.ಡಿ.ಎಂ. ಆಯು ರ್ವೇದ ಆಸ್ಪತ್ರೆಯಲ್ಲಿ 180 ಮತ್ತು ಕೊಲ್ಲೂರಿನಲ್ಲಿ 250 ಬೆಡ್‌ಗಳ ವ್ಯವಸ್ಥೆ ಮಾಡ ಲಾಗಿದೆ ಎಂದು ಕೋವಿಡ್‌ -19 ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌ ತಿಳಿಸಿದರು.

10 ದಿನಗಳಲ್ಲಿ ಸರಕಾರಿ
ಕೋವಿಡ್‌ ಲ್ಯಾಬ್‌
ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ ಪಾಸಿಟಿವ್‌ ಪ್ರಕರಣ ಗಳಲ್ಲಿ ಯಾವುದೇ ರೋಗಿಗೆ ಆಕ್ಸಿಜನ್‌, ವೆಂಟಿಲೇಟರ್‌, ಐಸಿಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ. ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು ಆರೋಗ್ಯವಾಗಿದ್ದಾರೆ. ಕ್ವಾರಂಟೈನ್‌ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ. ಜಿಲ್ಲೆಯ ಸರಕಾರಿ ಕೋವಿಡ್‌ ಲ್ಯಾಬ್‌ 10 ದಿನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಮಾಹಿತಿ ನೀಡಿದರು.

ಹೆಚ್ಚುವರಿ ಆಸ್ಪತ್ರೆಗೆ ಪ್ರಸ್ತಾವನೆ ನೀಡಿ
ಕೋವಿಡ್‌-19 ವಿರುದ್ಧ ಹೋರಾಟದಲ್ಲಿ ಪ್ರತಿಯೊಬ್ಬರೂ ಸೇನಾನಿಗಳಂತೆ ಕಾರ್ಯನಿರ್ವಹಿಸಬೇಕಿದೆ. ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ಆರೋಗ್ಯ ಇಲಾಖೆಗೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲು ಬದ್ಧ. ಪ್ರಸ್ತುತ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವ ನಾಗರಿಕರನ್ನು ಕ್ವಾರಂಟೈನ್‌ ಕೇಂದ್ರ ಗಳಿಗೆ ತಲುಪಿಸಲು ಸೂಕ್ತ ವಾಹನ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟವರಿಗೆ ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿನ ಸಿಬಂದಿ ಕೊರತೆ ಬಗ್ಗೆ ಹೊರ ಗುತ್ತಿಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ತಿಳಿಸಿದರು.

Advertisement

ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ
ರಾ.ಹೆ.169ಎ ನಲ್ಲಿ ಪರ್ಕಳ ಸಮೀಪ ಗುಂಡಿ ಬಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದು ಕೂಡಲೇ ಅದನ್ನು ಮುಚ್ಚಬೇಕು. ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಸಂಸದರು ಸೂಚಿಸಿದರು.

ಕಾಮಗಾರಿ ವಿಳಂಬ
ಕುಂದಾಪುರ ಶಾಸ್ತ್ರೀ ಸರ್ಕಲ್‌ ಕಾಮಗಾರಿ ಪ್ರಗತಿ ಬಗ್ಗೆ ಉತ್ತರಿಸಿದ ಅಧಿಕಾರಿಗಳು, ಕೋವಿಡ್‌-19 ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದ್ದಾರೆ. ಈ ಕಾರಣಕ್ಕಾಗಿ ಕೆಲಸ ನಿಧಾನಗತಿಯಲ್ಲಿ ನಡೆಯುತ್ತಿದ್ದು, 2 ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಮುಕ್ತಾಯಗೊಳಿಸುವುದಾಗಿ ತಿಳಿಸಿದರು.ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕ ಕೆ. ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಡಲ್ಕೊರೆತ ತಡೆಗೆ ಮುನ್ನೆಚ್ಚರಿಕೆ ವಹಿಸಿ
ಕಡಲ್ಕೊರೆತ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.ನಿಟ್ಟೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶೇ.90 ಸಿವಿಲ್‌ ಕೆಲಸಗಳು ಮುಕ್ತಾಯಗೊಂಡಿದ್ದು, 2 ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ . ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರೈಸಬೇಕು.ಸ್ವತ್ಛ ಭಾರತ್‌ ಯೋಜನೆಯಡಿ ನಗರ ಪ್ರದೇಶದಲ್ಲಿನ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಆತ್ಮ ನಿರ್ಭರ್‌ ಯೋಜನೆಯಡಿ ಸಣ್ಣ ಕೈಗಾರಿಕೆಗಳಿಗೆ ನೀಡಿರುವ ಸಾಲ ಸೌಲಭ್ಯಗಳ ಅನುಷ್ಠಾನ ಕುರಿತಂತೆ ಎಲ್ಲ ಬ್ಯಾಂಕ್‌ಗಳಿಗೆ ಸೂಚನೆ ನೀಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಲೀಡ್‌ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಖಾತೆಗಳಿಗೆ 94.86 ಕೋ.ರೂ. ಜಮೆ
ಪಿಎಂ ಕಿಸಾನ್‌ ಯೋಜನೆ ಯಡಿ ಜಿಲ್ಲೆಯ 1,34,000 ರೈತರ ಖಾತೆಗಳಿಗೆ 94.86 ಕೋ.ರೂ.ಗಳ ಜಮೆ ಆಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ ವಿತರಿಸಲಾಗುವ ಆಹಾರ ಧಾನ್ಯಗಳನ್ನು ಸಮರ್ಪಕ ವಾಗಿ ವಿತರಿಸುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next