Advertisement

ಆ.21ರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಅನಿರ್ದಿಷ್ಟಾವಧಿ ಬಂದ್‌ 

07:00 AM Jul 31, 2017 | Team Udayavani |

ಹುಬ್ಬಳ್ಳಿ: ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್‌ 21 ರಿಂದ ಅನಿರ್ದಿಷ್ಟಾವಧಿ ಶಾಲಾ- ಕಾಲೇಜು ಬಂದ್‌ ಮಾಡಲಾಗುತ್ತಿದ್ದು, ಸರ್ಕಾರ ಸ್ಪಂದಿಸ ದಿದ್ದರೆ ಸೆಪ್ಟೆಂಬರ್‌ 5ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ಕರಾಳ ದಿನ ಆಚರಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

Advertisement

ಭಾನುವಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದ ಪೂರ್ವಭಾವಿ ಸಭೆಯಲ್ಲಿ
ಮಾತನಾಡಿದ ಅವರು, ಈಗಾಗಲೇ ಒಕ್ಕೂಟ ಹಲವು ಬಾರಿ ಸಭೆ ಸೇರಿ ಚರ್ಚಿಸಿ ಸರ್ಕಾರಕ್ಕೆ ಮನವಿ ಮಾಡಿದ್ದರೂ, ಸೂಕ್ತ ಸ್ಪಂದನೆ ಇಲ್ಲವಾದ್ದರಿಂದ ಹೋರಾಟ ಅನಿವಾರ್ಯವಾಗಿದೆ ಎಂದರು.

ಆಗಸ್ಟ್‌ 5ರಂದು ಆಯಾ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ಹಾಗೂ ನೌಕರರು ಸಭೆ ಸೇರಿ ಚರ್ಚಿಸ
ಲಿದ್ದು, ಆ.12ರಂದು ತಾಲೂಕು ಮಟ್ಟದಲ್ಲಿ ಮೆರವಣಿಗೆ ಮಾಡಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು. ಆ.19ರಂದು ತಾಲೂಕುಗಳ ಎಲ್ಲ ಪದಾಧಿಕಾರಿಗಳು ಸೇರಿ ಜಿಲ್ಲಾ ಮಟ್ಟದಲ್ಲಿ ಮೆರವಣಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಆ.21ರಿಂದ ಎಲ್‌ಕೆಜಿಯಿಂದ ಪದವಿ ಹಂತದವರೆಗಿನ ಎಲ್ಲ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್‌ ಮಾಡಲಾ
ಗುವುದು. ಆ.28ರಂದು ಹುಬ್ಬಳ್ಳಿ ಇಲ್ಲವೆ ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗುವುದು ಎಂದರು.

ಕರಾಳ ದಿನಾಚರಣೆ: ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡುವಲ್ಲಿ ತಾರತಮ್ಯ ಸಲ್ಲ, ಖಾಸಗಿ ಶಾಲಾ- ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅವಕಾಶ, ವಿದ್ಯಾರ್ಥಿ-ಶಿಕ್ಷಕರ ಅನುಪಾತ ಕಡಿತ ಸೇರಿ ಸುಮಾರು 20 ಪ್ರಮುಖ ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಲಾಗಿದೆ. ಬೇಡಿಕೆಗೆ ಸ್ಪಂದಿಸದಿದ್ದರೆ ಅನಿವಾರ್ಯವಾಗಿ ಕರಾಳ ದಿನಾಚರಣೆ ಮಾಡಬೇಕಾಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next