Advertisement

ಗಡಿ ನುಸುಳುತ್ತಿದ್ದ ಮೂವರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

07:05 PM Aug 25, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲವಾಗಿದ್ದು, 3 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಸಂಜೆ ತಿಳಿಸಿದ್ದಾರೆ.

Advertisement

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಪಡೆಗಳು ಗಮನಿಸಿ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಧರು ಒಳನುಗ್ಗಲು ಯತ್ನಿಸಿದವರಿಗೆ ಮಂಜು ಮುಸುಕಿದ ವಾತಾವರಣ ಸೇರಿದಂತೆ ಪ್ರತಿಕೂಲ ಹವಾಮಾನದ ನಡುವೆಯೂ ಸವಾಲು ಹಾಕಿ ಗುಂಡಿನ ಚಕಮಕಿ ನಡೆಸಿ ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದ್ದಾರೆ.

ಎಕೆ ರೈಫಲ್‌ಗಳು ಸೇರಿದಂತೆ ದೊಡ್ಡ ಪ್ರಮಾಣದ ಯುದ್ಧದ ಅಂಗಡಿಗಳು, ಒಂದು ಚೀನಾದ ಎಂ-16 ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next