Advertisement

ಬಿಜೆಪಿಯಿಂದ ಕುರುಬ ಸಮುದಾಯಕ್ಕೆ ಅನ್ಯಾಯ

11:43 AM Mar 27, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್‌ ನೀಡದೆ ಮೋಸ ಮಾಡಿದೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ‌ ರಾಜ್ಯಾಧ್ಯಕ್ಷ ಆನೇಕಲ್‌ ದೊಡ್ಡಯ್ಯ ಆರೋಪಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಕುರುಬ ಸಮುದಾಯಕ್ಕೆ ಅವಕಾಶ ನೀಡದೇ ಇರುವುದು ಇಡೀ ಕುರುಬ ಸಮುದಾಯಕ್ಕೆ ಮಾಡಿ ಅಪಮಾನವಾಗಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಸಮುದಾಯ ಎನಿಸಿಕೊಂಡಿರುವ ಕುರುಬ ಸಮುದಾಯವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ. ಇದರ ವಿರುದ್ಧ ಕುರುಬ ಸಮುದಾಯ ಜಾಗೃತಗೊಳ್ಳಬೇಕಾಗಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next