Advertisement

ಅಶೋಕ ವಿರುದ್ಧದ ತನಿಖೆಗೆ ಮೇ 30ರವರೆಗೆ ತಡೆಯಾಜ್ಞೆ

12:20 PM Mar 28, 2018 | |

ಬೆಂಗಳೂರು: ಅನರ್ಹ ಫ‌ಲಾನುಭವಿಗಳಿಗೆ ಬಗರ್‌ಹುಕುಂ ಜಮೀನು ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ವಿರುದ್ಧದ ಎಸಿಬಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ಮೇ 30ರವರೆಗೆ ವಿಸ್ತರಿಸಿದೆ. 

Advertisement

ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಕೋರಿ ಅಶೋಕ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ  ನ್ಯಾ. ಆರ್‌.ಬಿ ಬೂದಿಹಾಳ್‌ ಅವರಿದ್ದ ಏಕಸದಸ್ಯ ಪೀಠ, ವಾದ -ಪ್ರತಿವಾದ ಆಲಿಸಿದ ಬಳಿಕ ಮೇ 30ರವರೆಗೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ವಿಸ್ತರಿಸಿ ವಿಚಾರಣೆ ಮುಂದೂಡಿತು.

1998 ರಿಂದ 2006ರ ಅವಧಿಯವರೆಗೆ ಅಶೋಕ್‌ ಅವರು ಬೆಂಗಳೂರು ದಕ್ಷಿಣ ತಾಲೂಕು ಬಗರ್‌ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಕಾನೂನು ಬಾಹಿರವಾಗಿ ಅನರ್ಹ ಫ‌ಲಾನುಭವಿಗಳಿಗೆ ಭೂ ಮಂಜೂರಾತಿ ಮಾಡಿ¨ªಾರೆ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಅಶೋಕ್‌ ಅವರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next