Advertisement

ಹೈಕಮಾಂಡ್‌ ನೀಡುವ ಜವಾಬ್ದಾರಿ ನಿಭಾಯಿಸುವೆ

09:57 AM Feb 26, 2017 | Team Udayavani |

ಗದಗ: ಕಾಂಗ್ರೆಸ್‌ ಹೈಕಮಾಂಡ್‌ ನೀಡುವ ಯಾವುದೇ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಕಾಂಗ್ರೆಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ಸರ್ಕಾರದ ಎಲ್ಲ ಸಚಿವರು ಪಕ್ಷದ ಕಾರ್ಯಕರ್ತರೇ. ನಾನು ಸಹಿತ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮೆಲ್ಲರ ಸಂಕಲ್ಪ. ಹೀಗಾಗಿ ಹೈಕಮಾಂಡ್‌ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ತಾವು ಬದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next