ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ ಇತ್ತೀಚೆಗೆ ವೃದ್ಧನೊಬ್ಬ ಮಹಿಳೆಯರ ಮುಂದೆ ಹಸ್ತಮೈಥುನ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, ನ್ಯಾಯ ಒದಗಿಸುವಂತೆ ನಗರ ಪೊಲೀಸರ ಮೊರೆ ಹೋಗಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆಯರು ಕುಳಿತುಕೊಂಡಿರುವ ಜಾಗದಲ್ಲಿ ಸುತ್ತಾಡಿರುವ ವೃದ್ಧ, ಅವರ ಮುಂಭಾಗದ ಮರದ ಕೆಳಗೆ ಕುಳಿತು ಹಸ್ತಮೈಥುನ ಮಾಡಿಕೊಂಡಿದ್ದಾನೆ. ಅದನ್ನು ಗಮನಿಸಿದ ಮಹಿಳೆಯರು, ವೃದ್ಧನಿಗೆ ಎಚ್ಚರಿಕೆ ನೀಡಿದ್ದಾರೆ. ಆಗ ಆತ ಸ್ಥಳದಿಂದ ಓಡಿದ್ದು, ಮಹಿಳೆ ಆತನನ್ನು ಹಿಂಬಾಲಿಸಿದ್ದಾರೆ. ಆದರೆ, ಆತ ಪರಾರಿಯಾಗಿದ್ದಾನೆ.
ವಿಡಿಯೋ ವೈರಲ್: ವೈರಲ್ ಆಗಿರುವ ಈ ವಿಡಿಯೋದಲ್ಲಿ ವೃದ್ಧ ಮರದಡಿ ಕುಳಿತಿದ್ದು, ಯಾರೂ ತನ್ನನ್ನು ನೋಡುತ್ತಿಲ್ಲ ಎಂದು ತಿಳಿದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ. ನಂತರ ಆತನನ್ನು ಮಹಿಳೆಯೊಬ್ಬರು ಪ್ರಶ್ನಿಸಿದ್ದು, ವೃದ್ಧ ಅದರಿಂದ ಗಾಬರಿಯಾಗಿ ಎದ್ದು ಅಲ್ಲಿಂದ ಓಡಿಹೋಗುತ್ತಿದ್ದಾನೆ. ಆರಂಭದಲ್ಲಿ ಆತನ ಮುಖವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ, ಏನು ಮಾಡ್ತಿದ್ದೀ ಎಂದು ಮಹಿಳೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯೂರಿಟಿಯನ್ನು ಕರೆಯಬೇಕಾ ಎಂದು ಮಹಿಳೆ ಕೇಳುತ್ತಿರುವುದನ್ನು ಈ ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಾಸೀಂ ಎಂಬವರು, “ಈತ ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ ಎಂದು ಅನೇಕ ಮಹಿಳೆಯರು ಆರೋಪ ಮಾಡಿದ್ದಾರೆ’ ಎಂದು ವಿಡಿಯೋಗೆ ಶೀರ್ಷಿಕೆ ಕೊಟ್ಟಿದ್ದಾರೆ.
ವಾಸೀಂ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸರು, ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ದೂರು ದಾಖಲಿಸಿಕೊಂಡುಡಿದ್ದು, ವಿಡಿಯೋ ವೈರಲ್ ಮಾಡಿರುವ ವಾಸೀಂ ಅವರಿಗೆ ಇನ್ನಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.