ಅಂಕೋಲಾ: ಅವಿವಾಹಿತ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅವರ್ಸಾದಲ್ಲಿ ನಡೆದಿದೆ.
ಶೋಭಾ ಶೇಷು ಆಗೇರ(36) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಶೋಭಾ ಶಿಕ್ಷಣ ಮುಗಿಸಿ ಮನೆಯಲ್ಲೇ ಇದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಶುಕ್ರವಾರ ಏಕಾಏಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಬಾವಿಯಿಂದ ಮೇಲೆತ್ತಿದರು. ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ, ಬೊಮ್ಮಯ್ಯ ನಾಯ್ಕ, ಅನಿಲ ಮಹಾಲೆ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲು ಸಹಕರಿಸಿದರು.
ಇದನ್ನೂ ಓದಿ: ಗಂಗಾವತಿ: ಹಲ್ಲೆ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪಿ.ಎಸ್.ಐ ಮಾಲಿನಿ ಹಾಸಭಾವಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.