Advertisement

ಕೆಎಂಎಫ್‌ ನಿರ್ದೇಶಕರಾಗಿ ಆನಂದ್‌ ಕುಮಾರ್‌ ಆಯ್ಕೆ

12:58 PM Jun 15, 2019 | Suhan S |

ದೊಡ್ಡಬಳ್ಳಾಪುರ: ತಾಲೂಕಿನ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್‌ ಕುಮಾರ್‌ ಅವರು ಕರ್ನಾಟಕ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾ ವಣೆಯಲ್ಲಿ 14 ನಿರ್ದೇಶಕರ ಪೈಕಿ 8 ಮತಗಳನ್ನು ಪಡೆಯುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

Advertisement

ಕೆಎಂಎಫ್‌ ನಿರ್ದೇಶಕ ಸ್ಥಾನಕ್ಕೆ ಆಯ್ಕೆಮಾಡುವ ಮೂಲಕ ಜವಾಬ್ದಾರಿ ಹೆಚ್ಚಾಗಿದೆ. ಮಹಾ ಮಂಡಳಿಯಿಂದ ರೈತರಿಗೆ ಹಾಗೂ ಬೆಂಗಳೂರು ಹಾಲು ಒಕ್ಕೂಟಕ್ಕೆ ದೊರೆಯುವ ಸೌಲಭ್ಯಗಳನ್ನು ತರುವ ಮೂಲಕ ಜಿಲ್ಲೆಯಲ್ಲಿ ಹೈನು ಗಾರಿಕೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಕೆ.ಎಂ.ಎಫ್‌ ನೂತನ ನಿರ್ದೇಶಕ ಬಿ.ಸಿ.ಆನಂದ್‌ ಕುಮಾರ್‌ ಹೇಳಿದರು.

ಕೆಎಂಎಫ್‌ ನೂತನ ನಿರ್ದೇಶಕರನ್ನು ಸಚಿವ ಡಿ.ಕೆ.ಶಿವಕುಮಾರ್‌, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್‌.ಜಿ.ವೆಂಕಟಾಚಲಯ್ಯ, ಕೆಪಿಸಿಸಿ ಸದಸ್ಯರಾದ ಎಂ.ಜಿ.ಶ್ರೀನಿವಾಸ್‌, ಜಿ.ಲಕ್ಷ್ಮೀ ಪತಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಚುಂಚೇಗೌಡ, ತಾಲೂಕು ಪಂಚಾಯ್ತಿ ಅಧ್ಯಕ್ಷ ಎಚ್.ವಿ.ಶ್ರೀವತ್ಸ, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್‌ ಅಧ್ಯಕ್ಷ ಕೆ.ಜಿ.ಅಶೋಕ್‌, ಕಸಬಾ ಬ್ಲಾಕ್‌ ಅಧ್ಯಕ್ಷ ವೆಂಕಟೇಶ್‌, ತೂಬಗೆರೆ ಬ್ಲಾಕ್‌ ಅಧ್ಯಕ್ಷ ಎನ್‌.ರಂಗಪ್ಪ, ಎಪಿಎಂಸಿ ನಿರ್ದೇಶಕ ಮಂಜುನಾಥ್‌, ಟಿಎಪಿಎಂಸಿಎಸ್‌ ನಿರ್ದೇಶಕ ಎಂ.ಗೋವಿಂದರಾಜು, ಮುಖಂಡರಾದ ಆರ್‌.ವಿ.ಗೌಡ, ಆರ್‌.ಸಿ. ರಾಲಿಂಗಯ್ಯ, ಅರಳುಮಲ್ಲಿಗೆ ವೆಂಕಟೇಶ್‌ ಅಭಿನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next