Advertisement

ಹಿಮಾಚಲ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಆನಂದ್ ಶರ್ಮಾ ರಾಜೀನಾಮೆ

02:35 PM Aug 21, 2022 | Team Udayavani |

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಹಿಮಾಚಲ ಪ್ರದೇಶದ ಪ್ರಚಾರ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಭಾನುವಾರ ಹೇಳಿದ್ದಾರೆ.

Advertisement

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಶರ್ಮಾ ಈ ನಿರ್ಧಾರ ಕೈಗೊಂಡಿದ್ದು, ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಶರ್ಮಾ ಅವರು ಕಾಂಗ್ರೆಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಆದರೆ, ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರಿಸುವುದಾಗಿ ಗಾಂಧಿ ಅವರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next