Advertisement
ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಭಾನುವಾರ ಕರ್ನಾಟಕರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲೇ ತಿಳಿಸಿದಂತೆ ಹಂಪಿ ಉತ್ಸವವನ್ನು ಈ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ಸರಳವಾಗಿ ಆಚರಿಸಲಾಗುವುದು. ಸದ್ಯ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಅದಕ್ಕಾಗಿ ಅದು ಮುಗಿದ ತಕ್ಷಣ ನಡೆಸಲು ನಿರ್ಧರಿಸಲಾಗುವುದು. ಈ ಉತ್ಸವ ಆಚರಣೆ ಬಗ್ಗೆ ಸರ್ಕಾರ ನಿರ್ಲಕ್ಷ ಧೋರಣೆ ಇಲ್ಲ. ಈಗಾಗಲೇ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿರಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
Related Articles
Advertisement
ಎರಡನೇ ಬೆಳೆಗೆ ನೀರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈ ಬಾರಿ ಬೇಸಿಗೆಯ ಎರಡನೇ ಬೆಳೆಗೆ ನೀರು ಬಿಡುವ ಕುರಿತು ಚರ್ಚಿಸಲು ಸದ್ಯದಲ್ಲೇ ನೀರಾವರಿಸಲಹಾ ಸಮಿತಿ ಸಭೆ ಕರೆಯಲಾಗುವುದು ಎಂದ ಸಚಿವ ಆನಂದ್‌ಸಿಂಗ್, ತುಂಗಭದ್ರಾ ಜಲಾಶಯ ಇಂದಿಗೂ ಭರ್ತಿಯಾಗಿದೆ.ಜತೆಗೆ ಈ ಬಾರಿ ಪ್ರಕೃತಿಯು ರೈತರಿಗೆ ಸಹಕಾರ ನೀಡಿದ್ದು ಉತ್ತಮವಾಗಿ ಮಳೆ ಸುರಿದಿದೆ.
ಇದರಿಂದ ಎರಡನೇ ಬೆಳೆ ಬೆಳೆಯಲು ನೀರಿನ ಸಮಸ್ಯೆ ಇಲ್ಲ. ಆದರೆ ಯಾವ ಯಾವ ಕಾಲುವೆಗಳಿಗೆ ಎಷ್ಟು ಪ್ರಮಾಣದಲ್ಲಿ ನೀರು ಹಂಚಿಕೆ ಮಾಡಿ ಬೆಳೆಯನ್ನು ಉತ್ತಮವಾಗಿ ಪಡೆಯಲು ಸಾಧ್ಯ ಎಂಬುದರ ಬಗ್ಗೆ ಅಧಿ ಕಾರಿಗಳು ಮತ್ತು ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಶಾಸಕ, ಸಂಸದರಸಭೆ ಕರೆದು ನಿರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಶಾಸಕ ಜಿ. ಸೋಮಶೇಖರರೆಡ್ಡಿ ಸೇರಿ ಹಲವರು ಇದ್ದರು.