Advertisement
ಇದೇ ವೇಳೆ, ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆಯೂ ಗರಂ ಆದ ಅವರು, “ಕೆಲವರು ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿದ್ದಾರೆ. ನಾನು ಪೋಸ್ಟಲ್ ಡಿಪಾರ್ಟ್‌ಮೆಂಟ್‌ನಲ್ಲಿ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Advertisement
ಸಂವಿಧಾನದ ಅಡಿಯಲ್ಲಿ ಯಾವುದೇ ಪಕ್ಷಪಾತವಿಲ್ಲದೇ ಕ್ರಮ ಕೈಗೊಳ್ಳುತ್ತೇನೆ. ಇಷ್ಟೇ ದಿನದಲ್ಲಿ ರಾಜೀನಾಮೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ನಿಯಮವೇನಿಲ್ಲ. ಕಾನೂನು ಬದ್ಧವಾಗಿ ಶೀಘ್ರ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಗರಂ: ಇದೇ ವೇಳೆ, ಅವರು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಫ್ಯಾಕ್ಸ್ ಮೂಲಕ ರಾಜಿನಾಮೆ ನೀಡಲು ನಾನು ಪೋಸ್ಟಲ್ ಡಿಪಾರ್ಟ್‌ಮೆಂಟ್‌ನಲ್ಲಿಲ್ಲ.
ಮಾಧ್ಯಮಗಳಲ್ಲಿ ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಲಿ. ದನಗಳ ರೀತಿಯಲ್ಲಿ ನಾನು ವರ್ತನೆ ಮಾಡಲು ಆಗುವುದಿಲ್ಲ. ಸಂವಿಧಾನದ ನೀತಿ ನಿಯಮಗಳನ್ನು ಮೊದಲು ತಿಳಿದುಕೊಳ್ಳಲಿ’ ಎಂದು ಏರು ಧ್ವನಿಯಲ್ಲಿ ಆಕ್ರೋಶ ಹೊರ ಹಾಕಿದರು.
ಆ ಶಾಸಕ ಮಾಧ್ಯಮಗಳ ಮುಂದೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ ಎಂದ ಅವರು, ಮೈಂಡ್ ಯುವರ್ ಲಾಂಗ್ವೇಜ್ ಎಂದು ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಸ್ಪೀಕರ್ ಸ್ಥಾನ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕುಳಿತಿರುವ ನಾನು ಬಹಳ ಚಿಕ್ಕ ವ್ಯಕ್ತಿ ಎಂದೂ ಹೇಳಿದರು.
ಇನ್ನು ಬೇರೆ ಶಾಸಕರು ರಾಜೀನಾಮೆ ನೀಡುವುದಕ್ಕೆ ಸಮಯ ಕೇಳಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಶಾಸಕರೂ ಸಮಯ ಕೇಳಿಲ್ಲ. ರಾಜೀನಾಮೆ ನೀಡಲು ಯಾರಾದರೂ ನನ್ನ ಭೇಟಿಗೆ ಅವಕಾಶ ಕೇಳಿದರೆ, ಅವರಿಗೆ ನನ್ನ ನಂಬರ್ ಕೊಡಿ ಎಂದು ಹಾಸ್ಯ ಚಟಾಕಿ ಹಾರಿಸಿದರು.