Advertisement

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

10:02 PM Mar 25, 2024 | Team Udayavani |

ತುಮಕೂರು: ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕೆ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್‌ ಕುಮಾರ್‌ ಹೆಗಡೆಗೆ ಟಿಕೆಟ್‌ ಕೈ ತಪ್ಪಿದೆ ಎಂದು ಮಾಜಿ ಸಚಿವ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

Advertisement

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಅವಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ. ಕಾಂಗ್ರೆಸ್‌ನವರು ಕೆಲವು ವಿಷಯಗಳನ್ನು ತಿರುಚುತ್ತಾರೆ. ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿಲ್ಲ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ ಅವರು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಭಾವನೆ ಮೂಡಿದೆ.

ಪುಣ್ಯಾತ್ಮ ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ನಮಗೆ ಸಂವಿಧಾನ ಕೊಟ್ಟಿದ್ದಾರೆ. ಈ ಸಂವಾದದಲ್ಲಿಯೂ ಸಂವಿಧಾನ ಪುಸ್ತಕ ನೀಡಿದ್ದೀರಿ, ನಾನು ಸಂವಿಧಾನದ ಆಶಯದಂತೆ ನಡೆಯುತ್ತೇನೆ ಎಂದು ವಿ. ಸೋಮಣ್ಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next