Advertisement

ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷದಿಂದ ಮುಕ್ತರಾದ ಅನಂತ ಹೆಗಡೆ ಅಶೀಸರ

03:56 PM Dec 29, 2021 | Team Udayavani |

ಶಿರಸಿ: ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿದ್ದ ಅನಂತ ಹೆಗಡೆ ಅಶೀಸರ ಅಧ್ಯಕ್ಷ ಸ್ಥಾನದಿಂದ ಮುಕ್ತರಾಗಿದ್ದಾರೆ.

Advertisement

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಎರಡು ವರ್ಷಗಳಿಂದ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದ ಅವಧಿ 2021 ಡಿಸೆಂಬರ್ ತಿಂಗಳಲ್ಲಿ ಮುಗಿಯುತ್ತಿದೆ. ಹೀಗಾಗಿ ನಾನು ಈ ಜವಾಬ್ದಾರಿಯಿಂದ ಮುಕ್ತನಾಗುತ್ತಿದ್ದೇನೆ. ಈ ಅವಧಿಯಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿಕಟಪೂರ್ವ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮಂಡಳಿಯ ಸದಸ್ಯರು,ಅಧಿಕಾರಿ, ಸಿಬ್ಬಂದಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸುವುದಾಗಿ ಕೂಡ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next