Advertisement
ಬಾಳೆಹಣ್ಣಿಗೊಲಿವ ಭಗವಂತಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದಿದ್ದು ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ದಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು ,500 ಬಾಳೆಹಣ್ಣು , ದಿನಕ್ಕೊಂದು ಬಾಳೆಹಣ್ಣು ,ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತ ಗೊಂಡಿದ್ದು ಈ ಬಾರಿ ಬಾಳಿಹಣ್ಣಿನ ಬೆಲೆ ದುಬಾರಿ ಹಾಗೂ ಕದಳೀ ಬಾಳೆಹಣ್ಣಿನ ಪೂರೈಕೆ ಕಡಿಮೆ ಆದ್ದರಿಂದ ಭಕ್ತರು ಪರದಾಡುವ ಪರಿಸ್ಥಿತಿ ಇದೆ.
ವರ್ಷದಿಂದ ವರ್ಷಕ್ಕೆ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಭಕ್ತರು ಯಾವುದೇ ನೂಕು ನುಗ್ಗಲಿಲ್ಲದೆ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.ಭಕ್ತರು ಮಳೆಯಲ್ಲಿ ಒದ್ದೆಯಾಗದಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ದೇವಸ್ಥಾನ ಒಳಾಂಗಣದ ಸುತ್ತ ತಗಡಿನ ಚಪ್ಪರ ಹಾಕಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ ತಿಳಿಸಿದ್ದಾರೆ.
Related Articles
ಆಷಾಢ ಮಾಸದ ಬಳಿಕ ಬರುವ ಸಿಂಹ ಮಾಸ ನೂತನ ಮದುಮಕ್ಕಳಿಗೆ ವಿಶೇಷ. ಮದುಮಗ ತನ್ನ ಮನೆ ಹಿರಿಯರೊಂದಿಗೆ ಬಂದು ತನ್ನ ಮಡದಿಯನ್ನು ಕರೆದೊಯ್ಯುವ ಹಾಗೂ ಮದುಮಗಳು ತನ್ನ ತಂದೆ-ತಾಯಿಯೊಂದಿಗೆ ಬಂದು ಗಂಡನ ಮನೆಯೆಡೆಗೆ ನಡೆಯಲು ಸೇರುವ ತಾಣ ಪೆರ್ಡೂರಿನ ಸಿಂಹ ಸಂಕ್ರಮಣವಾಗಿತ್ತು. ಅದಕ್ಕಾಗಿಯೇ ಕಳೆದ ವರ್ಷ ಮದುವೆಯಾದ ಜೋಡಿಗಳು ಜತೆಯಾಗಿ ಬಂದು ಮುಂದಿನ ಭವ್ಯ ಭವಿಷ್ಯಕ್ಕಾಗಿ ದೇವರನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದ ಸಂಪ್ರದಾಯವಾಗಿದೆ. ಈ ಪದ್ಧತಿ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಕಳೆದ ವರ್ಷ ಸುಮಾರು 55 ಸಾವಿರಕ್ಕೂ ಮಿಕ್ಕಿ ಭಕ್ತಾಧಿಗಳು ದೇವರ ದರ್ಶನಕ್ಕೆ ಪಾತ್ರರಾಗಿದ್ದಾರೆ.
Advertisement
– ಉದಯ ಕುಮಾರ್ ಶೆಟ್ಟಿ ಹೆಬ್ರಿ