Advertisement
ಗುರುವಾರ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮಾಡಿ ‘’ಇಲ್ಲೊಬ್ಬ #TiharReturned ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತಿ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ” ಎಂದಿದ್ದರು.
Related Articles
Advertisement
ಯೇಸು ಪ್ರತಿಮೆಗೆ ಜಾಗ ಕೊಟ್ಟಿರುವುದಷ್ಟೇ ಅಲ್ಲ, ನಾಣು ಸಚಿವನಾಗಿದ್ದಾಗ ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಮೆಯೋಹಾಲ್ ನಲ್ಲಿ ಕಚೇರಿ ಸ್ಥಾಪನೆಯಾಗಿ, ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರಾಗಿದೆ. ಕೆಂಪೇಗೌಡ ಜಯಂತಿ ಆಚರಣೆ, ತನ್ನಿಮಿತ್ತ ಸರಕಾರಿ ರಜೆ ಘೋಷಣೆ ಮಾಡಿಸಿದ್ದೇನೆ. ಆದಿಚುಂಚನಗಿರಿ ಶ್ರೀ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಹುಟದಟೂರು ರಾಮನಗರದ ಬಿಡದಿಯ ಬಾಣಂದೂರು ಹಾಗೂ ಸಿದ್ದಗಂಗಾ ಶ್ರೀಗಳಾದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ರಾಮನಗರದ ಮಾಗಡಿ ಗ್ರಾಮದ ಪ್ರಗತಿಗೆ ತಲಾ 25 ಕೋಟಿ ರೂ. ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿದೆ.
ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಡಾ. ಬಿ.ಆರ್ ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ ಎಂದು ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನಕಪುರದ ಕಪಾಲಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯೇಸು ಪ್ರತಿಮೆಗೆ ಶಿಲಾನ್ಯಾಸ ಮಾಡಲಾಗಿದೆ.