Advertisement

ಸೇವೆಯ ಸೌಭಾಗ್ಯ ಕೊಟ್ಟ‌ ಕ್ಷೇತ್ರದ ಜನತೆಗೆ ಭಾವನಾತ್ಮಕ ಪತ್ರ ಬರೆದ ಅನಂತ್!

10:56 PM Mar 24, 2024 | Team Udayavani |

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

Advertisement

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಹಿಂದೂ ಹುಲಿ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.

Advertisement

ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next