ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ 48 ಗಂಟೆಗಳಿಂದ ನಡೆಯುತ್ತಿರುವ ಭಯೋತ್ಪಾದಕರ ಎನ್ ಕೌಂಟರ್ ನಲ್ಲಿ ಯೋಧನೊಬ್ಬ ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೋಕರ್ ನಾಗ್ ನ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರನ್ನು ಬೇಟೆಯಾಡಲು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರದಿಂದ ಈ ಗುಂಡಿನ ಚಕಮಕಿ ನಡೆಯುತ್ತಿದೆ.
ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಇಬ್ಬರು ಮತ್ತು ಒಬ್ಬ ಪೊಲೀಸ್ ಸೇರಿದಂತೆ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. ಭಯೋತ್ಪಾದಕರ ಕಡೆಯಿಂದ ಗಾಯಗೊಂಡಿರುವ ಅಂಕಿಅಂಶಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ.
ಇದನ್ನೂ ಓದಿ:Asia Cup; ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆ ಸಾಧ್ಯತೆ
ಭದ್ರತಾ ಪಡೆಗಳು ತಮ್ಮ ತೀವ್ರವಾದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳಲ್ಲಿ ಸ್ಟ್ರೈಕ್-ಸಾಮರ್ಥ್ಯ ಹೆರಾನ್ ಡ್ರೋನ್‌ಗಳು ಸೇರಿದಂತೆ ಹೊಸ ತಲೆಮಾರಿನ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸುತ್ತಿವೆ.
19 ರಾಷ್ಟ್ರೀಯ ರೈಫಲ್ಸ್ ಘಟಕದ (19 RR) ಕಮಾಂಡಿಂಗ್ ಆಫೀಸರ್ ಕರ್ನಲ್ ಮನ್‌ಪ್ರೀತ್ ಸಿಂಗ್, ಮತ್ತು 19 ಆರ್ ಆರ್ ನ ಕಂಪನಿಯ ಕಮಾಂಡರ್ ಮೇಜರ್ ಆಶಿಶ್ ಧೋಂಚಕ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನಲ್ಲಿ ಡೆಪ್ಯುಟಿ ಸೂಪರಿಂಟೆಂಡೆಂಟ್ (ಡಿವೈಎಸ್‌ಪಿ) ಹಿಮನ್ಯುನ್ ಮುಜಾಮಿಲ್ ಭಟ್ ಅವರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ.