ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಮಂಗಳವಾರವೂ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಬಿಜ್‌ಬಿಹಾರದ ಮರ್ಹಾಮಾ ಸಂಗಮ್ ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಾಯಗೊಂಡಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿರುವ ಬಗ್ಗೆ ವಿವರಗಳು ಲಭ್ಯವಾಗಿದೆ.
ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅವಿತಿರುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ರಾಷ್ಟ್ರೀಯ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಅನಂತ್‌ನಾಗ್ ಜಿಲ್ಲೆಯ ಅಚಬಾಲ್ ಪ್ರದೇಶದಲ್ಲಿ ಸೋಮವಾರ ನಡೆದ ಗುಂಡಿನ ಕಾಳಗದಲ್ಲಿ ಸೇನೆಯ ಮೇಜರ್‌ವೊಬ್ಬರು ಹುತಾತ್ಮರಾಗಿ, ಮತ್ತೂಬ್ಬ ಅಧಿಕಾರಿ ಹಾಗೂ ಇಬ್ಬರು ಯೋಧರು ಗಾಯಗೊಂಡ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.