Advertisement

ಧರ್ಮಸ್ಥಳ: ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ, ವಿಜೇತರಿಗೆ ಪುರಸ್ಕಾರ ವಿತರಣೆ

12:25 PM Feb 13, 2021 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಂತೆ ಆಯೋಜಿಸಲಾದ 18ನೇ ವರ್ಷದ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಚಾಲನೆ ದೊರೆಯಿತು.

Advertisement

ಬೆಂಗಳೂರಿನ ಚಿತ್ರ ಕಲಾವಿದ ಬಾಗೂರು ಮಾರ್ಕಂಡೇಯ ಅವರಿಂದ ಕುಂಚ ಹಾಗೂ ಮಂಗಳೂರು ಸನಾತನ ನಾಟ್ಯಾಲಯದಿಂದ ಗಾನ-ನೃತ್ಯ ವೈಭವ ಕಾರ್ಯಕ್ರಮ ನೆರೆದವರ ಕರತಾಡನಕ್ಕೆ ಸಾಕ್ಷಿಯಾಯಿತು.

ಇದನ್ನೂ ಓದಿ:ಪ್ರೇಮಿಗಳ ದಿನದಂದು ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಕ್ರಮ: ಮಂಗಳೂರು ಡಿಸಿಪಿ

ಖ್ಯಾತ ಚಲನಚಿತ್ರ ನಟ ಬೆಂಗಳೂರಿನ ಡಾ.ಶ್ರೀಧರ್ ಪುರಸ್ಕಾರ ನೀಡಿ ವಿಜೇತರನ್ನು ಗೌರವಿಸಲು ಆಗಮಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದರು.

Advertisement

ಅಂಚೆ-ಕುಂಚ ಸ್ಪರ್ಧೆ: ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ಬಿಡಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ – ಹೀಗೆ ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆ. ಕಳೆದ 18 ವರ್ಷಗಳಲ್ಲಿ 2,22,950 ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ:ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು

ಶ್ರೀ ಕ್ಷೇ.ಧ. ಶಾಂತಿವನ ಟ್ರಸ್ಟ್ ಟ್ರಸ್ಟಿ ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next