ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ನಿರೂಪಕಿ ಅನುಶ್ರೀ ಅವರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದು ಶನಿವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆಯೆಂದು ಹೇಳಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ಸೆ.29ರ ಮೊದಲು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು ಆದರೆ ನೋಟೀಸ್ ನೀಡಿದ ಸಂದರ್ಭ ಶುಕ್ರವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು ಆದರೆ ಇಂದು ವಿಚಾರಣೆಗೆ ಹಾಜರಾಗದೆ ಇರುವ ಹಿನ್ನೆಲೆಯಲ್ಲಿ ನಾಳೆ ಮಂಗಳೂರು ಸಿಸಿಬಿ ಪೊಲೀಸ್ ಕಚೇರಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ಸಿಸಿಬಿ ಹಾಗೂ ಎಕಾನಮಿಕ್ ಮತ್ತು ನಾರ್ಕೊಟಿಕ್ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಸೇವನೆ ಮತ್ತು ಮಾರಾಟ ಆರೋಪದಲ್ಲಿ ಕೊರಿಯೋಗ್ರಾಫರ್ ಕಿಶೋರ್ ಅಮನ್ ಮತ್ತು ಅಕೀಲ್ ನೌಶೀಲ್‌ನನ್ನು ಬಂಧಿಸಿದ್ದರು. ಅನಂತರ ತರುಣ್ ಎಂಬವರನ್ನು ಕೂಡ ವಿಚಾರಣೆ ನಡೆಸಿದ್ದರು. ಈ ಸಂದರ್ಭ ಅನುಶ್ರೀಗೆ ಇವರ ಜತೆ ನಂಟು ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ನೋಟೀಸ್ ನೀಡಲಾಗಿತ್ತು.
ಇದನ್ನೂ ಓದಿ :ಚೆನ್ನೈ-ಡೆಲ್ಲಿ ಕದನ ಕುತೂಹಲ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿ
ಡ್ರಗ್ ಜಾಲದ ಬಗ್ಗೆ ಮಾತನಾಡಿದ ನಟಿ ಅನುಶ್ರೀ ಈ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ ಆದರೆ ಪೋಲೀಸರ ವಿಚಾರಣೆಗೆ ನಾನು ಸಹಕರಿಸುತ್ತೇನೆ ಎಂದು ಹೇಳಿದ್ದರು.
ಡ್ರಗ್ಸ್ ಜಾಲದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳಾದ ಕಿಶೋರ್ ಅಮನ್ ಶೆಟ್ಟಿ ಮತ್ತು ಅಕೀಲ್ ನೌಶೀಲ್‌ನನ್ನು ಪೊಲೀಸರು ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಬ್ಬರಿಗೂ ಅ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.