Advertisement

ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

10:39 AM May 28, 2022 | Team Udayavani |

ಹೈದರಾಬಾದ್: ಸಿಲಿಂಡರ್ ಸ್ಫೋಟಗೊಂಡು, ಮನೆಯ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂರು ವರ್ಷದ ಮಗು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಾನಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ

ಘಟನೆಯಲ್ಲಿ ಮತ್ತಿಬ್ಬರು ಬೆಂಕಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಮೇ 28) ಅನಂತಪುರ್ ಜಿಲ್ಲೆಯ ಮುಲಕೇಡು ಗ್ರಾಮದ ಮನೆಯೊಂದರಲ್ಲಿ ಅಡುಗೆ ತಯಾರಿಸುತ್ತಿದ್ದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಸಮೀಪದ ಮನೆಗಳಿಗೂ ಹಾನಿಯಾಗಿರುವುದಾಗಿ ವರದಿ ವಿವರಿಸಿದೆ. ಸಿಲಿಂಡರ್ ಸ್ಫೋಟದ ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಜೈನಬಿ (60ವರ್ಷ), ದಾಡು(36ವರ್ಷ), ಷರ್ಫುನ್ನಿ (28ವರ್ಷ) ಎಂದು ಗುರುತಿಸಲಾಗಿದೆ, ಅಲ್ಲದೇ 3 ವರ್ಷದ ಮಗು ಕೂಡಾ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next